Proverbs · chapter 28 · verse 6
Proverbs 28:6 in Kannada
ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
Aishvaryavantanaagiddaroo tanna maargadalli vakra vaagiruvavaniginta tanna yathaarthateyalli nade yuva daridranu shreshthanu.
Proverbs 28:6 in English
- King James Version (KJV)
- Better [is] the poor that walketh in his uprightness, than [he that is] perverse [in his] ways, though he [be] rich.
- World English Bible (WEB)
- Better is the poor who walks in his integrity than he who is perverse in his ways, and he is rich.
- American Standard Version (ASV)
- Better is the poor that walketh in his integrity, Than he that is perverse in [his] ways, though he be rich.
- Bible in Basic English (BBE)
- Better is the poor man whose ways are upright, than the man of wealth whose ways are not straight.
- Darby Translation (DBY)
- Better is the poor that walketh in his integrity, than he that is perverse, double in ways, though he be rich.
- Webster's Bible (WBS)
- Better [is] the poor that walketh in his uprightness, than [he that is] perverse [in his] ways, though he [is] rich.
- Young's Literal Translation (YLT)
- Better [is] the poor walking in his integrity, Than the perverse of ways who is rich.
Read in context
- 4ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
- 5ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
- 6ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
- 7ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
- 8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
Cross references
- Proverbs 19:1 ಜ್ಞಾನೋಕ್ತಿಗಳು 19:1ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
- Luke 16:19–23 ಲೂಕನು 16:19–23ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
- Proverbs 28:18 ಜ್ಞಾನೋಕ್ತಿಗಳು 28:18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
- Proverbs 19:22 ಜ್ಞಾನೋಕ್ತಿಗಳು 19:22ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
- Proverbs 16:8 ಜ್ಞಾನೋಕ್ತಿಗಳು 16:8ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
- Acts 24:24–27 ಅಪೊಸ್ತಲರ ಕೃತ್ಯಗಳು 24:24–27ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು. ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು. ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು. ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.