Proverbs · chapter 28 · verse 9
Proverbs 28:9 in Kannada
ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
Nyaayapramaanavannu kelade tanna kiviyannu tirugisikolluvavana praarthaneyu asahya.
Proverbs 28:9 in English
- King James Version (KJV)
- He that turneth away his ear from hearing the law, even his prayer [shall be] abomination.
- World English Bible (WEB)
- He who turns away his ear from hearing the law, even his prayer is an abomination.
- American Standard Version (ASV)
- He that turneth away his ear from hearing the law, Even his prayer is an abomination.
- Bible in Basic English (BBE)
- As for the man whose ear is turned away from hearing the law, even his prayer is disgusting.
- Darby Translation (DBY)
- He that turneth away his ear from hearing the law, even his prayer is an abomination.
- Webster's Bible (WBS)
- He that turneth away his ear from hearing the law, even his prayer [shall be] abomination.
- Young's Literal Translation (YLT)
- Whoso is turning his ear from hearing the law, Even his prayer [is] an abomination.
Read in context
- 7ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
- 8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
- 9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
- 10ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
- 11ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
Cross references
- Psalm 66:18 ಕೀರ್ತನೆಗಳು 66:18ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
- 2 Timothy 4:3–4 2 ತಿಮೊಥೆಯನಿಗೆ 4:3–4ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- Zechariah 7:11–13 ಜೆಕರ್ಯ 7:11–13ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು. ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Psalm 109:7 ಕೀರ್ತನೆಗಳು 109:7ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
- Isaiah 1:15–16 ಯೆಶಾಯ 1:15–16ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ. ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
- Luke 13:25–27 ಲೂಕನು 13:25–27ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು. ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ. ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
- Isaiah 58:7–11 ಯೆಶಾಯ 58:7–11ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Proverbs 21:13 ಜ್ಞಾನೋಕ್ತಿಗಳು 21:13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.