Proverbs · chapter 29 · verse 1
Proverbs 29:1 in Kannada
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
Aneka sala gadarisalpattaroo baggadakuttigeyavanu elada haage phakkane muridu beeluvanu.
Proverbs 29:1 in English
- King James Version (KJV)
- He, that being often reproved hardeneth [his] neck, shall suddenly be destroyed, and that without remedy.
- World English Bible (WEB)
- He who is often rebuked and stiffens his neck will be destroyed suddenly, with no remedy.
- American Standard Version (ASV)
- He that being often reproved hardeneth his neck Shall suddenly be destroyed, and that without remedy.
- Bible in Basic English (BBE)
- A man hating sharp words and making his heart hard, will suddenly be broken and will not be made well again.
- Darby Translation (DBY)
- He that being often reproved hardeneth his neck, shall suddenly be destroyed, and without remedy.
- Webster's Bible (WBS)
- He, that being often reproved hardeneth [his] neck, shall suddenly be destroyed, and that without remedy.
- Young's Literal Translation (YLT)
- A man often reproved, hardening the neck, Is suddenly broken, and there is no healing.
Read in context
- 1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- 2ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
- 3ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
Cross references
- Proverbs 6:15 ಜ್ಞಾನೋಕ್ತಿಗಳು 6:15ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.
- Proverbs 1:24–31 ಜ್ಞಾನೋಕ್ತಿಗಳು 1:24–31ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು. ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ. ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
- 1 Samuel 2:25 1 ಸಮುವೇಲನು 2:25ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.
- Zechariah 7:11–14 ಜೆಕರ್ಯ 7:11–14ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು. ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು. ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Proverbs 28:18 ಜ್ಞಾನೋಕ್ತಿಗಳು 28:18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
- John 13:18 ಯೋಹಾನನು 13:18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
- John 13:26 ಯೋಹಾನನು 13:26ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.
- John 6:70–71 ಯೋಹಾನನು 6:70–71ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು. ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- Nehemiah 9:29 ನೆಹೆಮೀಯ 9:29ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
- Jeremiah 35:13–16 ಯೆರೆಮೀಯ 35:13–16ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ. ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ. ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ. ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- 2 Chronicles 36:15–17 2 ಪೂರ್ವಕಾಲವೃತ್ತಾಂತ 36:15–17ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.