Proverbs · chapter 29 · verse 10
Proverbs 29:10 in Kannada
ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
Kolepaatakaru neetivantarannu dveshisu ttaare; yathaarthavantaru avana praanavannu hudu kuttaare.
Proverbs 29:10 in English
- King James Version (KJV)
- The bloodthirsty hate the upright: but the just seek his soul.
- World English Bible (WEB)
- The bloodthirsty hate a man of integrity; and they seek the life of the upright.
- American Standard Version (ASV)
- The bloodthirsty hate him that is perfect; And as for the upright, they seek his life.
- Bible in Basic English (BBE)
- Men of blood are haters of the good man, and evil-doers go after his soul.
- Darby Translation (DBY)
- The bloodthirsty hate the perfect, but the upright care for his soul.
- Webster's Bible (WBS)
- The blood-thirsty hate the upright: but the just seek his soul.
- Young's Literal Translation (YLT)
- Men of blood hate the perfect, And the upright seek his soul.
Read in context
- 8ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.
- 9ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
- 10ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
- 11ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
- 12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
Cross references
- John 15:18–19 ಯೋಹಾನನು 15:18–19ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ. ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
- 1 John 3:12–13 1 ಯೋಹಾನನು 3:12–13ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ. ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
- Genesis 4:5–8 ಆದಿಕಾಂಡ 4:5–8ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು. ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು? ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು. ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
- 1 Samuel 22:11–23 1 ಸಮುವೇಲನು 22:11–23ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು. ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು. ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು. ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ. ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು. ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು. ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು. ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು. ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು. ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು. ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
- 1 Samuel 20:31–33 1 ಸಮುವೇಲನು 20:31–33ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು. ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು. ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
- Acts 7:60 ಅಪೊಸ್ತಲರ ಕೃತ್ಯಗಳು 7:60ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
- Luke 23:34 ಲೂಕನು 23:34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
- Mark 6:18–19 ಮಾರ್ಕನು 6:18–19ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು. ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ.
- John 5:34 ಯೋಹಾನನು 5:34ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.
- Romans 10:1 ರೋಮಾಪುರದವರಿಗೆ 10:1ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
- Jeremiah 13:15–17 ಯೆರೆಮೀಯ 13:15–17ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ. ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ. ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- 1 Samuel 15:11 1 ಸಮುವೇಲನು 15:11ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.