Proverbs · chapter 29 · verse 12
Proverbs 29:12 in Kannada
ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
Sullige kivigoduva adhikaarige kivigottare avana sevakarellaroo dushtare.
Proverbs 29:12 in English
- King James Version (KJV)
- If a ruler hearken to lies, all his servants [are] wicked.
- World English Bible (WEB)
- If a ruler listens to lies, all of his officials are wicked.
- American Standard Version (ASV)
- If a ruler hearkeneth to falsehood, All his servants are wicked.
- Bible in Basic English (BBE)
- If a ruler gives attention to false words, all his servants are evil-doers.
- Darby Translation (DBY)
- If a ruler hearken to lying words, all his servants are wicked.
- Webster's Bible (WBS)
- If a ruler hearkeneth to lies, all his servants [are] wicked.
- Young's Literal Translation (YLT)
- A ruler who is attending to lying words, All his ministers [are] wicked.
Read in context
- 10ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
- 11ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
- 12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
- 13ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.
- 14ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
Cross references
- Proverbs 20:8 ಜ್ಞಾನೋಕ್ತಿಗಳು 20:8ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
- 2 Kings 10:6–7 2 ಅರಸುಗಳು 10:6–7ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
- 1 Samuel 22:8–23 1 ಸಮುವೇಲನು 22:8–23ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು. ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು. ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು. ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು. ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು. ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು. ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ. ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು. ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು. ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು. ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು. ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು. ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು. ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
- Psalm 52:2–4 ಕೀರ್ತನೆಗಳು 52:2–4ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ. ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ. ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
- Psalm 101:5–7 ಕೀರ್ತನೆಗಳು 101:5–7ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು. ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- 1 Samuel 23:19–23 1 ಸಮುವೇಲನು 23:19–23ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ? ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು. ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ. ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ; ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
- 2 Samuel 3:7–11 2 ಸಮುವೇಲನು 3:7–11ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು. ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ? ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು. ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.
- 2 Samuel 4:5–12 2 ಸಮುವೇಲನು 4:5–12ಬೇರೋತಿನ ಮಗನಾಗಿರುವ ರಿಮ್ಮೋನನ ಮಕ್ಕ ಳಾದ ರೇಕಾಬನೂ ಬಾಣನೂ ಹೊರಟು ಮಧ್ಯಾಹ್ನದ ಬಿಸಿಲಿನಲ್ಲಿ ಮಂಚದ ಮೇಲೆ ಮಲಗಿಕೊಂಡಿರುವ ಈಷ್ಬೋಶೆತನ ಮನೆಗೆ ಬಂದರು. ಗೋಧಿಯನ್ನು ತಕ್ಕೊಂಡು ಹೋಗುವವರಾಗಿ ನಡು ಮನೆಯೊಳಗೆ ಬಂದು ಅವನ ಐದನೇ ಎಲುಬಿನ ಸಂದಿನಲ್ಲಿ ತಿವಿದರು. ರೇಕಾಬನೂ ಅವನ ಸಹೋದರನಾದ ಬಾಣನೂ ತಪ್ಪಿಸಿಕೊಂಡು ಹೋದರು. ಅವರು ಮನೆಯೊಳಗೆ ಪ್ರವೇಶಿಸಿದಾಗ ಅವನು ಮಲಗುವ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು; ಇವರು ಅವನನ್ನು ಹೊಡೆದು ಕೊಂದುಹಾಕಿ ತಲೆಯನ್ನು ಕಡಿದು ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು. ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು. ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು. ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
- 1 Kings 21:11–13 1 ಅರಸುಗಳು 21:11–13ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು. ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- Proverbs 25:23 ಜ್ಞಾನೋಕ್ತಿಗಳು 25:23ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.