Proverbs · chapter 29 · verse 23
Proverbs 29:23 in Kannada
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
Manushyana garvavu tannannu heenasthitige taruvadu; aatmadalli deenaraagiruvavaru sanmaanahonduvaru.
Proverbs 29:23 in English
- King James Version (KJV)
- A man’s pride shall bring him low: but honour shall uphold the humble in spirit.
- World English Bible (WEB)
- A man’s pride brings him low, but one of lowly spirit gains honor.
- American Standard Version (ASV)
- A man’s pride shall bring him low; But he that is of a lowly spirit shall obtain honor.
- Bible in Basic English (BBE)
- A man's pride will be the cause of his fall, but he who has a gentle spirit will get honour.
- Darby Translation (DBY)
- A man's pride bringeth him low; but the humble in spirit shall obtain honour.
- Webster's Bible (WBS)
- A man's pride shall bring him low: but honor shall uphold the humble in spirit.
- Young's Literal Translation (YLT)
- The pride of man humbleth him, And humility of spirit upholdeth honour.
Read in context
- 21ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.
- 22ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
- 23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
- 24ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.
- 25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
Cross references
- Matthew 23:12 ಮತ್ತಾಯನು 23:12ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
- Luke 14:11 ಲೂಕನು 14:11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- Proverbs 11:2 ಜ್ಞಾನೋಕ್ತಿಗಳು 11:2ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
- Isaiah 66:2 ಯೆಶಾಯ 66:2ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
- James 4:6–10 ಯಾಕೋಬನು 4:6–10ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ. ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Proverbs 15:33 ಜ್ಞಾನೋಕ್ತಿಗಳು 15:33ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- Luke 18:14 ಲೂಕನು 18:14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Isaiah 2:11–12 ಯೆಶಾಯ 2:11–12ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು. ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
- Proverbs 18:12 ಜ್ಞಾನೋಕ್ತಿಗಳು 18:12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- Matthew 18:4 ಮತ್ತಾಯನು 18:4ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.