Proverbs · chapter 29 · verse 8
Proverbs 29:8 in Kannada
ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.
Parihaasyagaararu pattanakke urlannu oddu ttaare; jnyaanigalu kopavannu tirugisuvaru.
Proverbs 29:8 in English
- King James Version (KJV)
- Scornful men bring a city into a snare: but wise [men] turn away wrath.
- World English Bible (WEB)
- Mockers stir up a city, but wise men turn away anger.
- American Standard Version (ASV)
- Scoffers set a city in a flame; But wise men turn away wrath.
- Bible in Basic English (BBE)
- Men of pride are the cause of violent acts in a town, but by wise men wrath is turned away.
- Darby Translation (DBY)
- Scornful men set the city in a flame; but the wise turn away anger.
- Webster's Bible (WBS)
- Scornful men bring a city into a snare: but wise [men] turn away wrath.
- Young's Literal Translation (YLT)
- Men of scorning ensnare a city, And the wise turn back anger.
Read in context
- 6ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.
- 7ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
- 8ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.
- 9ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
- 10ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
Cross references
- Proverbs 11:11 ಜ್ಞಾನೋಕ್ತಿಗಳು 11:11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ.
- Jeremiah 15:1 ಯೆರೆಮೀಯ 15:1ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
- James 5:15–18 ಯಾಕೋಬನು 5:15–18ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು. ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ. ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ. ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.
- James 3:5–6 ಯಾಕೋಬನು 3:5–6ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- Proverbs 16:14 ಜ್ಞಾನೋಕ್ತಿಗಳು 16:14ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
- Isaiah 28:14–22 ಯೆಶಾಯ 28:14–22ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ, ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ? ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ). ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು. ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ. ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು. ಮೈ ಚಾಚುವದಕ್ಕೆ ಅವನ ಹಾಸಿಗೆ ಚಿಕ್ಕದಾಗಿರು ವದು. ಮುದುರಿಕೊಂಡು ಮಲಗೇನಂದರೆ ಹೊದಿ ಕೆಯ ಅಗಲ ಸಾಲದು; ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು. ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- Numbers 16:48 ಅರಣ್ಯಕಾಂಡ 16:48ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.
- Deuteronomy 9:18–20 ಧರ್ಮೋಪದೇಶಕಾಂಡ 9:18–20ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು. ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು. ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
- Exodus 32:10–14 ವಿಮೋಚನಕಾಂಡ 32:10–14ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು. ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು? ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು. ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು. ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
- John 9:40–41 ಯೋಹಾನನು 9:40–41ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು. ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
- Amos 7:2–6 ಆಮೋಸ 7:2–6ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು. ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು. ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು. ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
- Matthew 27:39–43 ಮತ್ತಾಯನು 27:39–43ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ-- ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು. ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.