Proverbs · chapter 3 · verse 10
Proverbs 3:10 in Kannada
ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
Heege ninna kanajagalu samruddhiyinda tumbalpaduvavu, hosa draakshaarasadinda ninna tottigalu tumbi tulukuvavu.
Proverbs 3:10 in English
- King James Version (KJV)
- So shall thy barns be filled with plenty, and thy presses shall burst out with new wine.
- World English Bible (WEB)
- so your barns will be filled with plenty, and your vats will overflow with new wine.
- American Standard Version (ASV)
- So shall thy barns be filled with plenty, And thy vats shall overflow with new wine.
- Bible in Basic English (BBE)
- So your store-houses will be full of grain, and your vessels overflowing with new wine.
- Darby Translation (DBY)
- so shall thy barns be filled with plenty, and thy vats shall overflow with new wine.
- Webster's Bible (WBS)
- So shall thy barns be filled with plenty, and thy presses shall burst out with new wine.
- Young's Literal Translation (YLT)
- And filled are thy barns [with] plenty, And [with] new wine thy presses break forth.
Read in context
- 8ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.
- 9ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
- 10ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- 11ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;
- 12ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
Cross references
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Deuteronomy 28:8 ಧರ್ಮೋಪದೇಶಕಾಂಡ 28:8ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
- Proverbs 11:24–25 ಜ್ಞಾನೋಕ್ತಿಗಳು 11:24–25ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ. ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
- Joel 2:24 ಯೋವೇಲ 2:24ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.
- Proverbs 22:9 ಜ್ಞಾನೋಕ್ತಿಗಳು 22:9ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
- 2 Corinthians 9:6–11 2 ಕೊರಿಂಥದವರಿಗೆ 9:6–11ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
- Ecclesiastes 11:1–2 ಪ್ರಸಂಗಿ 11:1–2ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು. ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
- Malachi 3:10–11 ಮಲಾಕಿಯ 3:10–11ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Haggai 2:19 ಹಗ್ಗಾಯ 2:19ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- Matthew 10:42 ಮತ್ತಾಯನು 10:42ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Leviticus 26:2–5 ಯಾಜಕಕಾಂಡ 26:2–5ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು. ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು. ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.