Proverbs · chapter 3 · verse 13
Proverbs 3:13 in Kannada
ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
Jnyaanavannu kandu kolluvavanoo vivekavannu sampaadisikolluvavanoo dhanyanu.
Proverbs 3:13 in English
- King James Version (KJV)
- Happy [is] the man [that] findeth wisdom, and the man [that] getteth understanding.
- World English Bible (WEB)
- Happy is the man who finds wisdom, the man who gets understanding.
- American Standard Version (ASV)
- Happy is the man that findeth wisdom, And the man that getteth understanding.
- Bible in Basic English (BBE)
- Happy is the man who makes discovery of wisdom, and he who gets knowledge.
- Darby Translation (DBY)
- Blessed is the man that findeth wisdom, and the man that getteth understanding.
- Webster's Bible (WBS)
- Happy [is] the man [that] findeth wisdom, and the man [that] getteth understanding.
- Young's Literal Translation (YLT)
- O the happiness of a man [who] hath found wisdom, And of a man [who] bringeth forth understanding.
Read in context
- 11ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;
- 12ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
- 13ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
- 14ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
- 15ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
Cross references
- Proverbs 8:32–35 ಜ್ಞಾನೋಕ್ತಿಗಳು 8:32–35ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು. ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ. ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು. ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- Proverbs 4:5–9 ಜ್ಞಾನೋಕ್ತಿಗಳು 4:5–9ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ. ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು. ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ. ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು. ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.
- Ecclesiastes 9:15–18 ಪ್ರಸಂಗಿ 9:15–18ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ. ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು. ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ. ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
- 1 Kings 10:1–9 1 ಅರಸುಗಳು 10:1–9ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು. ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ. ಶೆಬದ ರಾಣಿಯು ಸೊಲೊ ಮೋನನ ಸಮಸ್ತ ಜ್ಞಾನವನ್ನೂ ಅವನು ಕಟ್ಟಿಸಿದ ಮಂದಿರವನ್ನೂ ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ-- ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು. ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು. ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು. ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
- 1 Kings 10:23–24 1 ಅರಸುಗಳು 10:23–24ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು. ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
- Proverbs 2:4 ಜ್ಞಾನೋಕ್ತಿಗಳು 2:4ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,