Proverbs · chapter 3 · verse 14
Proverbs 3:14 in Kannada
ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
Adara vyaapaaravoo belliya vyaapaarakkintaloo adara laabhavu sosida bangaarakkintaloo uttamavaagide.
Proverbs 3:14 in English
- King James Version (KJV)
- For the merchandise of it [is] better than the merchandise of silver, and the gain thereof than fine gold.
- World English Bible (WEB)
- For her good profit is better than getting silver, and her return is better than fine gold.
- American Standard Version (ASV)
- For the gaining of it is better than the gaining of silver, And the profit thereof than fine gold.
- Bible in Basic English (BBE)
- For trading in it is better than trading in silver, and its profit greater than bright gold.
- Darby Translation (DBY)
- For the gain thereof is better than the gain of silver, and her revenue than fine gold.
- Webster's Bible (WBS)
- For the merchandise of it [is] better than the merchandise of silver, and the gain of it than fine gold.
- Young's Literal Translation (YLT)
- For better [is] her merchandise Than the merchandise of silver, And than gold — her increase.
Read in context
- 12ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
- 13ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
- 14ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
- 15ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
- 16ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
Cross references
- Proverbs 8:10–11 ಜ್ಞಾನೋಕ್ತಿಗಳು 8:10–11ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ. ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- Proverbs 8:19 ಜ್ಞಾನೋಕ್ತಿಗಳು 8:19ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
- Job 28:13–19 ಯೋಬನು 28:13–19ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ. ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ. ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ. ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ. ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ; ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು. ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
- Revelation 3:18 ಪ್ರಕಟನೆ 3:18ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
- Psalm 119:162 ಕೀರ್ತನೆಗಳು 119:162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
- Psalm 119:111 ಕೀರ್ತನೆಗಳು 119:111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
- 2 Chronicles 1:11–12 2 ಪೂರ್ವಕಾಲವೃತ್ತಾಂತ 1:11–12ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
- Proverbs 2:4 ಜ್ಞಾನೋಕ್ತಿಗಳು 2:4ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Psalm 119:72 ಕೀರ್ತನೆಗಳು 119:72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- Philippians 3:8–9 ಫಿಲಿಪ್ಪಿಯವರಿಗೆ 3:8–9ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.