Proverbs · chapter 30 · verse 10
Proverbs 30:10 in Kannada
ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.
Avana yajamaananige sevakana vishayavaagi dooru helabeda; ida rinda avanu shapisaanu; aaga neenu doshi yaaguvi.
Proverbs 30:10 in English
- King James Version (KJV)
- Accuse not a servant unto his master, lest he curse thee, and thou be found guilty.
- World English Bible (WEB)
- “Don’t slander a servant to his master, lest he curse you, and you be held guilty.
- American Standard Version (ASV)
- Slander not a servant unto his master, Lest he curse thee, and thou be held guilty.
- Bible in Basic English (BBE)
- Do not say evil of a servant to his master, or he will put a curse on you, and you will get into trouble.
- Darby Translation (DBY)
- Speak not too much about a servant to his master, lest he curse thee, and thou be held guilty.
- Webster's Bible (WBS)
- Accuse not a servant to his master, lest he curse thee, and thou be found guilty.
- Young's Literal Translation (YLT)
- Accuse not a servant unto his lord, Lest he disesteem thee, and thou be found guilty.
Read in context
- 8ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
- 9ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
- 10ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.
- 11ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
- 12ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
Cross references
- Ecclesiastes 7:21 ಪ್ರಸಂಗಿ 7:21ನಿನ್ನ ಸೇವಕನು ನಿನ್ನನ್ನು ಶಪಿಸುವದನ್ನು ನೀನು ಕೇಳದಂತೆ ಆಡಿದ ಎಲ್ಲಾ ಮಾತುಗಳನ್ನು ನೀನು ಸಹ ಲಕ್ಷಿಸಬೇಡ;
- Romans 14:4 ರೋಮಾಪುರದವರಿಗೆ 14:4ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
- Proverbs 24:23–24 ಜ್ಞಾನೋಕ್ತಿಗಳು 24:23–24ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ. ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.
- Daniel 6:13 ದಾನಿಯೇಲನು 6:13ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
- 2 Chronicles 24:22–24 2 ಪೂರ್ವಕಾಲವೃತ್ತಾಂತ 24:22–24ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು. ವರುಷಾಂತ್ಯದಲ್ಲಿ ಏನಾಯಿತಂದರೆ, ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದು ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು. ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.
- Daniel 3:8–18 ದಾನಿಯೇಲನು 3:8–18ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು ಮಾತ ನಾಡಿ ಅರಸನಾದ ನೆಬೂಕದ್ನೆಚ್ಚರನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು. ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ! ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು. ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು. ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್ ಮೇಷಕ್ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ? ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು. ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು. ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.
- Daniel 6:24 ದಾನಿಯೇಲನು 6:24ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
- 2 Samuel 19:26–27 2 ಸಮುವೇಲನು 19:26–27ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು. ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.
- 1 Samuel 24:9 1 ಸಮುವೇಲನು 24:9ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?
- Deuteronomy 23:15 ಧರ್ಮೋಪದೇಶಕಾಂಡ 23:15ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.
- Proverbs 11:26 ಜ್ಞಾನೋಕ್ತಿಗಳು 11:26ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.
- 1 Samuel 26:19 1 ಸಮುವೇಲನು 26:19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.