Proverbs · chapter 30 · verse 27
Proverbs 30:27 in Kannada
ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.
Midategalige arasanilla; aadaroo avellaa dandudandaagi hoguttave.
Proverbs 30:27 in English
- King James Version (KJV)
- The locusts have no king, yet go they forth all of them by bands;
- World English Bible (WEB)
- The locusts have no king, yet they advance in ranks.
- American Standard Version (ASV)
- The locusts have no king, Yet go they forth all of them by bands;
- Bible in Basic English (BBE)
- The locusts have no king, but they all go out in bands;
- Darby Translation (DBY)
- the locusts have no king, yet they go forth all of them by bands;
- Webster's Bible (WBS)
- The locusts have no king, yet go they forth all of them by bands;
- Young's Literal Translation (YLT)
- A king there is not to the locust, And it goeth out — each one shouting,
Read in context
- 25ಇರುವೆಗಳು ದುರ್ಬಲ ಜಾತಿಯಾಗಿದ್ದರೂ ಬೇಸಿಗೆ ಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.
- 26ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ.
- 27ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.
- 28ಜೇಡರ ಹುಳು ತನ್ನ ಕೈಗಳಿಂದ ಹಿಡಿದುಕೊಳ್ಳುತ್ತದೆ; ಅದು ಅರಮನೆ ಗಳಲ್ಲಿ ಇರುತ್ತದೆ.
- 29ಗಂಭೀರ ಗಮನದ ಮೂರು ಪ್ರಾಣಿಗಳಿವೆ; ಹೌದು, ನಡತೆಯಲ್ಲಿ ಅಂದವಾಗಿರುವ ನಾಲ್ಕು ಪ್ರಾಣಿಗಳಿವೆ.
Cross references
- Joel 1:6–7 ಯೋವೇಲ 1:6–7ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು. ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
- Exodus 10:4–6 ವಿಮೋಚನಕಾಂಡ 10:4–6ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು. ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು. ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.
- Psalm 105:34 ಕೀರ್ತನೆಗಳು 105:34ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,
- Joel 2:25 ಯೋವೇಲ 2:25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
- Joel 2:7–11 ಯೋವೇಲ 2:7–11ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ. ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ. ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ. ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ. ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
- Revelation 9:3–11 ಪ್ರಕಟನೆ 9:3–11ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು. ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು. ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು. ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು. ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು. ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು. ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು. ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
- Joel 1:4 ಯೋವೇಲ 1:4ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
- Exodus 10:13–15 ವಿಮೋಚನಕಾಂಡ 10:13–15ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು. ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು. ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.