Proverbs · chapter 30 · verse 4
Proverbs 30:4 in Kannada
ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
Aakaashakke eridavanu illave ilidavanu yaaru? Tanna mushtigalalli gaaliyannu koodisidavanaaru? Vastradalli neerannu kattidava naaru? Bhoomiya konegalannellaa sthaapisidava naaru? Neenu heluvadaadare aatana hesarenu? Aatana magana hesarenu?
Proverbs 30:4 in English
- King James Version (KJV)
- Who hath ascended up into heaven, or descended? who hath gathered the wind in his fists? who hath bound the waters in a garment? who hath established all the ends of the earth? what [is] his name, and what [is] his son’s name, if thou canst tell?
- World English Bible (WEB)
- Who has ascended up into heaven, and descended? Who has gathered the wind in his fists? Who has bound the waters in his garment? Who has established all the ends of the earth? What is his name, and what is his son’s name, if you know?
- American Standard Version (ASV)
- Who hath ascended up into heaven, and descended? Who hath gathered the wind in his fists? Who hath bound the waters in his garment? Who hath established all the ends of the earth? What is his name, and what is his son’s name, if thou knowest?
- Bible in Basic English (BBE)
- Who has gone up to heaven and come down? who has taken the winds in his hands, prisoning the waters in his robe? by whom have all the ends of the earth been fixed? what is his name, and what is his son's name, if you are able to say?
- Darby Translation (DBY)
- Who hath ascended up into the heavens, and descended? Who hath gathered the wind in his fists? Who hath bound the waters in a mantle? Who hath established all the ends of the earth? What is his name, and what is his son's name, if thou knowest?
- Webster's Bible (WBS)
- Who hath ascended into heaven, or descended? who hath gathered the wind in his fists? who hath bound the waters in a garment? who hath established all the ends of the earth? what [is] his name, and what [is] his son's name, if thou canst tell?
- Young's Literal Translation (YLT)
- Who went up to heaven, and cometh down? Who hath gathered the wind in his fists? Who hath bound waters in a garment? Who established all ends of the earth? What [is] His name? and what His son's name? Surely thou knowest!
Read in context
- 2ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.
- 3ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ.
- 4ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
- 5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
- 6ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
Cross references
- John 3:13 ಯೋಹಾನನು 3:13ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
- Ephesians 4:8–10 ಎಫೆಸದವರಿಗೆ 4:8–10ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ. (ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ? ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
- Job 26:8 ಯೋಬನು 26:8ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು;
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Deuteronomy 30:12 ಧರ್ಮೋಪದೇಶಕಾಂಡ 30:12ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ.
- Matthew 1:21–23 ಮತ್ತಾಯನು 1:21–23ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು. ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು. ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Revelation 19:12 ಪ್ರಕಟನೆ 19:12ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.
- Isaiah 40:12–31 ಯೆಶಾಯ 40:12–31ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು? ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು? ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು? ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ. ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು. ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ. ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ? ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು. ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು. ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ? ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ. ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2 ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು. ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ. ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು. ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ? ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ. ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ. ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು. ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Exodus 34:5–7 ವಿಮೋಚನಕಾಂಡ 34:5–7ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು. ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Job 38:4–41 ಯೋಬನು 38:4–41ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು. ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು? ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು? ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು. ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು. ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ? ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ? ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ. ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು. ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ? ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ? ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು. ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ? ಅದರ ಗಡಿಯ ವರೆಗೆ ಅದನ್ನು ತೆಗೆದುಕೊಳ್ಳುವಿಯೋ? ಅದರ ಮನೆಗೆ ಹೋಗುವ ಹಾದಿಗಳನ್ನು ಗ್ರಹಿಸಿದಿಯೋ? ಆಗ ಹುಟ್ಟಿದ್ದರಿಂದ ಅದು ನಿನಗೆ ತಿಳಿಯುವದೋ? ನಿನ್ನ ದಿವಸಗಳ ಲೆಕ್ಕವು ಬಹಳವಾಗಿವೆಯಲ್ಲಾ. ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ? ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ. ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು? ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು? ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು; ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು. ಮಳೆಗೆ ತಂದೆ ಇದ್ದಾನೋ? ಇಲ್ಲವೆ ಮಂಜಿನ ಹನಿಗಳನ್ನು ಹುಟ್ಟಿಸು ವವನಾರು? ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು? ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು. ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ? ನೀನು ರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ತರುತ್ತೀಯೋ? ಇಲ್ಲವೆ ಸಪ್ತತಾರೆಗಳನ್ನು ಅವುಗಳ ಪುತ್ರರ ಸಹಿತ ವಾಗಿ ನೀನು ನಡಿಸುತ್ತೀಯೋ? ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ? ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ? ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ? ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ? ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ; ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು? ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ? ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು? ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
- Romans 10:6 ರೋಮಾಪುರದವರಿಗೆ 10:6ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
Original words (Hebrew)
- up · H5927עָלָה ʻâlâh
- heaven · H8064שָׁמַיִם shâmayim
- descended · H3381יָרַד yârad
- gathered · H622אָסַף ʼâçaph
- wind · H7307רוּחַ rûwach
- fists · H2651חֹפֶן chôphen
- bound · H6887צָרַר tsârar
- waters · H4325מַיִם mayim
- garment · H8071שִׂמְלָה simlâh
- established · H6965קוּם qûwm
- ends · H657אֶפֶס ʼepheç
- earth · H776אֶרֶץ ʼerets
- name · H8034שֵׁם shêm
- son’s · H1121בֵּן bên
- name · H8034שֵׁם shêm
- tell · H3045יָדַע yâdaʻ