Proverbs · chapter 30 · verse 9
Proverbs 30:9 in Kannada
ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
Illavaadare naanu santruptanaagi ninnannu niraakarisi--kartanu yaaru endu heliyenu? Illave naanu badavanaagi kaddukondu devara naamavannu ayogyavaagi ettenu.
Proverbs 30:9 in English
- King James Version (KJV)
- Lest I be full, and deny [thee], and say, Who [is] the LORD? or lest I be poor, and steal, and take the name of my God [in vain].
- World English Bible (WEB)
- lest I be full, deny you, and say, ‘Who is the LORD?’ or lest I be poor, and steal, and so dishonor the name of my God.
- American Standard Version (ASV)
- Lest I be full, and deny [thee], and say, Who is Jehovah? Or lest I be poor, and steal, And use profanely the name of my God.
- Bible in Basic English (BBE)
- For fear that if I am full, I may be false to you and say, Who is the Lord? or if I am poor, I may become a thief, using the name of my God wrongly.
- Darby Translation (DBY)
- lest I be full and deny [thee], and say, Who is Jehovah? or lest I be poor and steal, and outrage the name of my God.
- Webster's Bible (WBS)
- Lest I be full, and deny [thee] , and say, Who [is] the LORD? or lest I be poor, and steal, and take the name of my God [in vain] .
- Young's Literal Translation (YLT)
- Lest I become satiated, and have denied, And have said, 'Who [is] Jehovah?' And lest I be poor, and have stolen, And have laid hold of the name of my God.
Read in context
- 7ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;
- 8ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
- 9ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
- 10ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.
- 11ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
Cross references
- Hosea 13:6 ಹೋಶೇಯ 13:6ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
- Deuteronomy 31:20 ಧರ್ಮೋಪದೇಶಕಾಂಡ 31:20ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
- Ezekiel 16:49–50 ಯೆಹೆಜ್ಕೇಲನು 16:49–50ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
- Deuteronomy 8:10–14 ಧರ್ಮೋಪದೇಶಕಾಂಡ 8:10–14ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ. ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Nehemiah 9:25–26 ನೆಹೆಮೀಯ 9:25–26ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು. ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- Job 31:24–28 ಯೋಬನು 31:24–28ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ, ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ, ಸೂರ್ಯನು ಹೊಳೆಯುವದನ್ನು ಚಂದ್ರನು ಪ್ರಭೆಯಲ್ಲಿ ನಡೆಯುವದನ್ನು ನಾನು ನೋಡಲಾಗಿ, ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ; ಇದು ಸಹ ನ್ಯಾಯಾಧಿಪತಿಯಿಂದ ಶಿಕ್ಷಿಸಲ್ಪಡುವ ಅಪರಾಧವಾಗಿದೆ; ಯಾಕಂದರೆ ಉನ್ನತ ದಲ್ಲಿರುವ ದೇವರನ್ನು ಬೊಂಕಿದವನಾಗಿರುವೆನು.
- Deuteronomy 6:10–12 ಧರ್ಮೋಪದೇಶಕಾಂಡ 6:10–12ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
- Jeremiah 2:31 ಯೆರೆಮೀಯ 2:31ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
- Exodus 20:7 ವಿಮೋಚನಕಾಂಡ 20:7ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
- Joshua 24:27 ಯೆಹೋಶುವ 24:27ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
- Matthew 26:72 ಮತ್ತಾಯನು 26:72ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.