Proverbs · chapter 31 · verse 28
Proverbs 31:28 in Kannada
ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ.
Aakeya makkalu eddu aakeyannu dhanyalendu kareyuttaare; aakeya patiyu saha hogaluttaane.
Proverbs 31:28 in English
- King James Version (KJV)
- Her children arise up, and call her blessed; her husband [also], and he praiseth her.
- World English Bible (WEB)
- Her children rise up and call her blessed. Her husband also praises her:
- American Standard Version (ASV)
- Her children rise up, and call her blessed; Her husband [also], and he praiseth her, [saying]:
- Bible in Basic English (BBE)
- Her children get up and give her honour, and her husband gives her praise, saying,
- Darby Translation (DBY)
- Her children rise up and call her blessed; her husband [also], and he praiseth her:
- Webster's Bible (WBS)
- Her children rise up, and call her blessed; her husband [also] , and he praiseth her.
- Young's Literal Translation (YLT)
- Her sons have risen up, and pronounce her happy, Her husband, and he praiseth her,
Read in context
- 26ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು.
- 27ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ.
- 28ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ.
- 29ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ.
- 30ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
Cross references
- 2 Timothy 3:15–17 2 ತಿಮೊಥೆಯನಿಗೆ 3:15–17ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- 2 Timothy 1:5 2 ತಿಮೊಥೆಯನಿಗೆ 1:5ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
- 1 Kings 2:19 1 ಅರಸುಗಳು 2:19ಆದದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವದಕ್ಕೆ ಅರಸ ನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು ಅವಳಿಗೆ ಅಡ್ಡಬಿದ್ದು ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಅರಸನ ತಾಯಿಗೋಸ್ಕರ ಆಸನವನ್ನು ಹಾಕಿಸಿದನು.
- Psalm 116:16 ಕೀರ್ತನೆಗಳು 116:16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- Proverbs 31:1 ಜ್ಞಾನೋಕ್ತಿಗಳು 31:1ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ಪ್ರವಾದನೆಯು.
- Isaiah 62:4–5 ಯೆಶಾಯ 62:4–5ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು. ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
- Song of Solomon 7:1–9 ಪರಮಗೀತೆ 7:1–9ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ ನಿನ್ನ ಹೊಕ್ಕಳು ಮದ್ಯ ಕಡಿಮೆ ಇಲ್ಲದೆ ದುಂಡಾಗಿರುವ ಬಟ್ಟಲಿನ ಹಾಗಿದೆ. ನಿನ್ನ ಉದರವು ತಾವರೆಯ ಹೂವು ಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ. ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ. ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್ರಬ್ಬಿ ಮ್ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ. ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ. ಓ ಪ್ರಿಯಳೇ, ನೀನು ಆನಂದಗಳಿಗಾಗಿ ಎಷ್ಟೋ ಸುಂದರಿಯು, ಎಷ್ಟೋ ಮನೋಹರಳು ಆಗಿದ್ದೀ. ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ. ನಾನು ಖರ್ಜೂರದ ಮರದ ಬಳಿಗೆ ಹೋಗಿ ಅದರ ಗರಿಗಳನ್ನು ಹಿಡುಕೊಳ್ಳುವೆ ಅಂದುಕೊಂಡೆನು. ಇದಲ್ಲದೆ ಈಗ ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲು ಗಳ ಹಾಗೆಯೂ ನಿನ್ನ ಮೂಗಿನ ವಾಸನೆಯು ಸೇಬುಹಣ್ಣಿನ ಹಾಗೆಯೂ ಇರುವವು. ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು.