Proverbs · chapter 31 · verse 8
Proverbs 31:8 in Kannada
ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
Mookarigaagiyoo naashavaaguvadakke nemisalpatta varellarigaagiyoo ninna baayannu tere.
Proverbs 31:8 in English
- King James Version (KJV)
- Open thy mouth for the dumb in the cause of all such as are appointed to destruction.
- World English Bible (WEB)
- Open your mouth for the mute, in the cause of all who are left desolate.
- American Standard Version (ASV)
- Open thy mouth for the dumb, In the cause of all such as are left desolate.
- Bible in Basic English (BBE)
- Let your mouth be open for those who have no voice, in the cause of those who are ready for death.
- Darby Translation (DBY)
- Open thy mouth for the dumb, for the cause of all those that are left desolate.
- Webster's Bible (WBS)
- Open thy mouth for the dumb in the cause of all such as are appointed to destruction.
- Young's Literal Translation (YLT)
- Open thy mouth for the dumb, For the right of all sons of change.
Read in context
- 6ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.
- 7ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;
- 8ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
- 9ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
- 10ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
Cross references
- Psalm 82:3–4 ಕೀರ್ತನೆಗಳು 82:3–4ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ. ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
- Proverbs 24:11–12 ಜ್ಞಾನೋಕ್ತಿಗಳು 24:11–12ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
- Job 29:12–17 ಯೋಬನು 29:12–17ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
- Jeremiah 38:7–10 ಯೆರೆಮೀಯ 38:7–10ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ, ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ-- ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
- Esther 4:13–16 ಎಸ್ತೇರಳು 4:13–16ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ. ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು. ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ. ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- Jeremiah 26:24 ಯೆರೆಮೀಯ 26:24ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
- John 7:51 ಯೋಹಾನನು 7:51ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
- Jeremiah 26:16–19 ಯೆರೆಮೀಯ 26:16–19ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು. ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ-- ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು. ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
- Psalm 79:11 ಕೀರ್ತನೆಗಳು 79:11ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
- 1 Samuel 20:32 1 ಸಮುವೇಲನು 20:32ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.
- 1 Samuel 19:4–7 1 ಸಮುವೇಲನು 19:4–7ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ; ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು. ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು. ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.
- Proverbs 24:7 ಜ್ಞಾನೋಕ್ತಿಗಳು 24:7ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.