Proverbs · chapter 31 · verse 9
Proverbs 31:9 in Kannada
ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
Ninna baayi teredu neetiyinda nyaayateerisu; daridra rigaagiyoo dikkilladavarigaagiyoo vyaajyamaadu.
Proverbs 31:9 in English
- King James Version (KJV)
- Open thy mouth, judge righteously, and plead the cause of the poor and needy.
- World English Bible (WEB)
- Open your mouth, judge righteously, and serve justice to the poor and needy.”
- American Standard Version (ASV)
- Open thy mouth, judge righteously, And minister justice to the poor and needy.
- Bible in Basic English (BBE)
- Let your mouth be open, judging rightly, and give right decisions in the cause of the poor and those in need.
- Darby Translation (DBY)
- Open thy mouth, judge righteously, and minister justice to the afflicted and needy.
- Webster's Bible (WBS)
- Open thy mouth, judge righteously, and plead the cause of the poor and needy.
- Young's Literal Translation (YLT)
- Open thy mouth, judge righteously, Both the cause of the poor and needy!'
Read in context
- 7ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;
- 8ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
- 9ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
- 10ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
- 11ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ.
Cross references
- Isaiah 1:17 ಯೆಶಾಯ 1:17ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
- Amos 5:11–12 ಆಮೋಸ 5:11–12ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ. ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
- Leviticus 19:15 ಯಾಜಕಕಾಂಡ 19:15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
- Job 29:15–16 ಯೋಬನು 29:15–16ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
- Deuteronomy 1:16 ಧರ್ಮೋಪದೇಶಕಾಂಡ 1:16ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
- Jeremiah 22:3 ಯೆರೆಮೀಯ 22:3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
- Jeremiah 5:28 ಯೆರೆಮೀಯ 5:28ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
- Proverbs 16:12 ಜ್ಞಾನೋಕ್ತಿಗಳು 16:12ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
- Daniel 4:27 ದಾನಿಯೇಲನು 4:27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
- Isaiah 1:23 ಯೆಶಾಯ 1:23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
- Job 29:12 ಯೋಬನು 29:12ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.
- Deuteronomy 16:18–20 ಧರ್ಮೋಪದೇಶಕಾಂಡ 16:18–20ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು. ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ. ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.