Proverbs · chapter 4 · verse 17
Proverbs 4:17 in Kannada
ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
Avaru dushtatanada rottiyannu tindu balaatkaarada draakshaarasavannu kudiyu ttaare.
Proverbs 4:17 in English
- King James Version (KJV)
- For they eat the bread of wickedness, and drink the wine of violence.
- World English Bible (WEB)
- For they eat the bread of wickedness and drink the wine of violence.
- American Standard Version (ASV)
- For they eat the bread of wickedness, And drink the wine of violence.
- Bible in Basic English (BBE)
- The bread of evil-doing is their food, the wine of violent acts their drink.
- Darby Translation (DBY)
- For they eat the bread of wickedness, and drink the wine of violence.
- Webster's Bible (WBS)
- For they eat the bread of wickedness, and drink the wine of violence.
- Young's Literal Translation (YLT)
- For they have eaten bread of wickedness, And wine of violence they drink.
Read in context
- 15ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
- 16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
- 17ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
- 18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- 19ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
Cross references
- Proverbs 20:17 ಜ್ಞಾನೋಕ್ತಿಗಳು 20:17ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.
- Micah 6:12 ಮೀಕ 6:12ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
- Psalm 14:4 ಕೀರ್ತನೆಗಳು 14:4ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
- Proverbs 9:17 ಜ್ಞಾನೋಕ್ತಿಗಳು 9:17ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
- James 5:4–5 ಯಾಕೋಬನು 5:4–5ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ. ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
- Amos 8:4–6 ಆಮೋಸ 8:4–6ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ. ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
- Ezekiel 22:25–29 ಯೆಹೆಜ್ಕೇಲನು 22:25–29ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ. ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು. ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ. ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ. ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
- Micah 3:5 ಮೀಕ 3:5ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
- Job 24:5–6 ಯೋಬನು 24:5–6ಇಗೋ, ಅವರು ಕಾಡುಕತ್ತೆಗಳ ಹಾಗೆ ತಮ್ಮ ಕೆಲಸಕ್ಕೆ ಹೊರಡುತ್ತಾರೆ. ಬೆಳಿಗ್ಗೆ ಕೊಳ್ಳೆ ಹುಡುಕುತ್ತಾರೆ; ಅರಣ್ಯವು ಅವರಿಗೂ ಮಕ್ಕಳಿಗೂ ಆಹಾರ ಕೊಡು ತ್ತದೆ. ಹೊಲದಲ್ಲಿ ತಮ್ಮ ತಮ್ಮ ಬೆಳೆಯನ್ನು ಕೊಯ್ದು ದುಷ್ಟನ ದ್ರಾಕ್ಷೆಯ ತೋಟದಲ್ಲಿ ಹಣ್ಣು ಆರಿಸುತ್ತಾರೆ.
- Zephaniah 3:3 ಚೆಫನ್ಯ 3:3ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- Jeremiah 5:26–28 ಯೆರೆಮೀಯ 5:26–28ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ. ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ; ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.