Proverbs · chapter 5 · verse 14
Proverbs 5:14 in Kannada
ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.
Naanu koota mattu sabheya madhyadalli hechchu kadime ellaa kedinalli iddenu endu heluvi.
Proverbs 5:14 in English
- King James Version (KJV)
- I was almost in all evil in the midst of the congregation and assembly.
- World English Bible (WEB)
- I have come to the brink of utter ruin, among the gathered assembly.”
- American Standard Version (ASV)
- I was well-nigh in all evil In the midst of the assembly and congregation.
- Bible in Basic English (BBE)
- I was in almost all evil in the company of the people.
- Darby Translation (DBY)
- I was well nigh in all evil in the midst of the congregation and assembly.
- Webster's Bible (WBS)
- I was almost in all evil in the midst of the congregation and assembly.
- Young's Literal Translation (YLT)
- As a little thing I have been all evil, In the midst of an assembly and a company.
Read in context
- 12ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
- 13ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
- 14ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.
- 15ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
- 16ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ.
Cross references
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- 1 Corinthians 10:6–8 1 ಕೊರಿಂಥದವರಿಗೆ 10:6–8ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ. ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ. ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
- 2 Peter 2:10–18 2 ಪೇತ್ರನು 2:10–18ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ. ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ. ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ. ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು. ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು. ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು. ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
- Hosea 4:11–14 ಹೋಶೇಯ 4:11–14ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ. ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ. ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು. ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
- Numbers 25:1–6 ಅರಣ್ಯಕಾಂಡ 25:1–6ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು. ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು. ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು. ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು. ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು. ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು.
- Jude 1:7–13 ಯೂದನು 1:7–13ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ. ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ. ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು. ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ. ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ! ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.