Proverbs · chapter 5 · verse 22
Proverbs 5:22 in Kannada
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
Dushta nannu avana svanta akramagale hidiyuvavu; tanna paapagala paashagalindale avanu bandhisalpadu vanu.shikshanavillade avanu saayuvanu; tanna moodhatvada doddastikeyalli tappihoguvanu.
Proverbs 5:22 in English
- King James Version (KJV)
- His own iniquities shall take the wicked himself, and he shall be holden with the cords of his sins.
- World English Bible (WEB)
- The evil deeds of the wicked ensnare him. The cords of his sin hold him firmly.
- American Standard Version (ASV)
- His own iniquities shall take the wicked, And he shall be holden with the cords of his sin.
- Bible in Basic English (BBE)
- The evil-doer will be taken in the net of his crimes, and prisoned in the cords of his sin.
- Darby Translation (DBY)
- His own iniquities shall take the wicked, and he shall be holden with the cords of his sin.
- Webster's Bible (WBS)
- His own iniquities shall take the wicked himself, and he shall be held with the cords of his sins.
- Young's Literal Translation (YLT)
- His own iniquities do capture the wicked, And with the ropes of his sin he is holden.
Read in context
- 20ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ?
- 21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
- 22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- 23ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
Cross references
- Proverbs 1:31–32 ಜ್ಞಾನೋಕ್ತಿಗಳು 1:31–32ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು. ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
- Proverbs 11:5 ಜ್ಞಾನೋಕ್ತಿಗಳು 11:5ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.
- Psalm 9:15 ಕೀರ್ತನೆಗಳು 9:15ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
- Proverbs 1:18 ಜ್ಞಾನೋಕ್ತಿಗಳು 1:18ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
- Hosea 4:11–14 ಹೋಶೇಯ 4:11–14ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ. ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ. ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು. ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
- Numbers 32:23 ಅರಣ್ಯಕಾಂಡ 32:23ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
- Ephesians 5:5–6 ಎಫೆಸದವರಿಗೆ 5:5–6ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ. ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- Ecclesiastes 7:26 ಪ್ರಸಂಗಿ 7:26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
- Psalm 7:15–16 ಕೀರ್ತನೆಗಳು 7:15–16ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.