Proverbs · chapter 5 · verse 4
Proverbs 5:4 in Kannada
ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.
Aadare avala antyavu maachi patreyante kahiyoo ibbaayi kattiyante haritavoo iruttade.
Proverbs 5:4 in English
- King James Version (KJV)
- But her end is bitter as wormwood, sharp as a twoedged sword.
- World English Bible (WEB)
- but in the end she is as bitter as wormwood, and as sharp as a two-edged sword.
- American Standard Version (ASV)
- But in the end she is bitter as wormwood, Sharp as a two-edged sword.
- Bible in Basic English (BBE)
- But her end is bitter as wormwood, and sharp as a two-edged sword;
- Darby Translation (DBY)
- but her end is bitter as wormwood, sharp as a two-edged sword.
- Webster's Bible (WBS)
- But her end is bitter as wormwood, sharp as a two-edged sword.
- Young's Literal Translation (YLT)
- And her latter end [is] bitter as wormwood, Sharp as a sword [with] mouths.
Read in context
- 2ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.
- 3ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ.
- 4ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.
- 5ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ.
- 6ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.
Cross references
- Ecclesiastes 7:26 ಪ್ರಸಂಗಿ 7:26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- Psalm 57:4 ಕೀರ್ತನೆಗಳು 57:4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- Hebrews 4:12 ಇಬ್ರಿಯರಿಗೆ 4:12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- Proverbs 9:18 ಜ್ಞಾನೋಕ್ತಿಗಳು 9:18ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
- Proverbs 23:27–28 ಜ್ಞಾನೋಕ್ತಿಗಳು 23:27–28ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ. ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ.
- Proverbs 7:22–23 ಜ್ಞಾನೋಕ್ತಿಗಳು 7:22–23ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- Judges 16:15–21 ನ್ಯಾಯಸ್ಥಾಪಕರು 16:15–21ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು. ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು. ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು. ಅವನು ತನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆಂದು ದೆಲೀಲಳು ತಿಳಿದು ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ--ನೀವು ಈ ಸಾರಿ ಬನ್ನಿರಿ; ಅವನು ತನ್ನ ಹೃದಯವನ್ನೆಲ್ಲಾ ನನಗೆ ತಿಳಿಸಿದನು ಎಂದು ಕರೇಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಹಣವನ್ನು ತಮ್ಮ ಕೈಯಲ್ಲಿ ತಕ್ಕೊಂಡು ಅವಳ ಬಳಿಗೆ ಬಂದರು. ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು. ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು. ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
- Hebrews 12:15–16 ಇಬ್ರಿಯರಿಗೆ 12:15–16ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
- Judges 16:4–6 ನ್ಯಾಯಸ್ಥಾಪಕರು 16:4–6ಇದರ ತರುವಾಯ ಆದದ್ದೇನಂದರೆ, ಸೋರೇಕ್ ತಗ್ಗಿನಲ್ಲಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು. ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ--ನೀನು ಅವನನ್ನು ಮರುಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು ಕಟ್ಟಿ ಬಾಧಿಸಬಹುದೆಂದು ಅವನ ದೊಡ್ಡ ಶಕ್ತಿ ಯಾವದರಲ್ಲಿ ಅದೆ ಎಂದೂ ನೋಡು; ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯ ಗಳನ್ನು ಕೊಡುವೆವು ಅಂದರು. ಆಗ ದೆಲೀಲಳು ಸಂಸೋನನಿಗೆ--ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವದಕ್ಕೆ ನೀನು ಹೇಗೆ ಕಟ್ಟಲ್ಪಡಬಹುದೆಂದೂ ನನಗೆ ದಯಮಾಡಿ ತಿಳಿಸು ಅಂದಳು.
- Proverbs 6:24–35 ಜ್ಞಾನೋಕ್ತಿಗಳು 6:24–35ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು. ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ. ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು. ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ? ಒಬ್ಬನು ಧಗಧಗಿಸುವ ಕೆಂಡಗಳ ಮೇಲೆ ನಡೆದರೆ ಅವನ ಪಾದಗಳು ಸುಡುವದಿಲ್ಲವೋ? ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು. ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ. ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು. ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು. ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು. ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ. ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.