Proverbs · chapter 5 · verse 6
Proverbs 5:6 in Kannada
ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.
Avugalannu neenu tilidukollalaaradante jeevada maargavannu neenu vivechisalaaradashtu avala maargagalu chanchalavaagive.
Proverbs 5:6 in English
- King James Version (KJV)
- Lest thou shouldest ponder the path of life, her ways are moveable, [that] thou canst not know [them].
- World English Bible (WEB)
- She gives no thought to the way of life. Her ways are crooked, and she doesn’t know it.
- American Standard Version (ASV)
- So that she findeth not the level path of life: Her ways are unstable, [and] she knoweth [it] not.
- Bible in Basic English (BBE)
- She never keeps her mind on the road of life; her ways are uncertain, she has no knowledge.
- Darby Translation (DBY)
- Lest she should ponder the path of life, her ways wander, she knoweth not [whither].
- Webster's Bible (WBS)
- Lest thou shouldst ponder the path of life, her ways are movable, [that] thou canst not know [them] .
- Young's Literal Translation (YLT)
- The path of life — lest thou ponder, Moved have her paths — thou knowest not.
Read in context
- 4ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.
- 5ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ.
- 6ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.
- 7ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ.
- 8ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.
Cross references
- Proverbs 4:26 ಜ್ಞಾನೋಕ್ತಿಗಳು 4:26ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- Proverbs 5:21 ಜ್ಞಾನೋಕ್ತಿಗಳು 5:21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Proverbs 30:20 ಜ್ಞಾನೋಕ್ತಿಗಳು 30:20ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
- Proverbs 6:12–13 ಜ್ಞಾನೋಕ್ತಿಗಳು 6:12–13ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು. ಅವನು ತನ್ನ ಕಣ್ಣುಗಳಿಂದ ಸನ್ನೆಮಾಡಿ ತನ್ನ ಕಾಲುಗಳಿಂದ ಮಾತಾಡುತ್ತಾ ತನ್ನ ಬೆರಳುಗಳಿಂದ ಬೋಧಿಸುತ್ತಾನೆ.
- Psalm 119:59 ಕೀರ್ತನೆಗಳು 119:59ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
- Proverbs 7:10–21 ಜ್ಞಾನೋಕ್ತಿಗಳು 7:10–21ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು. (ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ. ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು). ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ. ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ. ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ. ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ. ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ. ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ. ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
- Proverbs 11:19 ಜ್ಞಾನೋಕ್ತಿಗಳು 11:19ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
- 2 Thessalonians 2:9–10 2 ಥೆಸಲೊನೀಕದವರಿಗೆ 2:9–10ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.