Proverbs · chapter 6 · verse 14
Proverbs 6:14 in Kannada
ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
Avana hrudayadalli moorkha tanavide. Yaavaagaloo avanu kedannu kalpisu ttaane. Avanu vaishamyavannu bittuttaane.
Proverbs 6:14 in English
- King James Version (KJV)
- Frowardness [is] in his heart, he deviseth mischief continually; he soweth discord.
- World English Bible (WEB)
- in whose heart is perverseness, who devises evil continually, who always sows discord.
- American Standard Version (ASV)
- In whose heart is perverseness, Who deviseth evil continually, Who soweth discord.
- Bible in Basic English (BBE)
- His mind is ever designing evil: he lets loose violent acts.
- Darby Translation (DBY)
- deceits are in his heart; he deviseth mischief at all times, he soweth discords.
- Webster's Bible (WBS)
- Frowardness [is] in his heart, he deviseth mischief continually; he soweth discord.
- Young's Literal Translation (YLT)
- Frowardness [is] in his heart, devising evil at all times, Contentions he sendeth forth.
Read in context
- 12ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು.
- 13ಅವನು ತನ್ನ ಕಣ್ಣುಗಳಿಂದ ಸನ್ನೆಮಾಡಿ ತನ್ನ ಕಾಲುಗಳಿಂದ ಮಾತಾಡುತ್ತಾ ತನ್ನ ಬೆರಳುಗಳಿಂದ ಬೋಧಿಸುತ್ತಾನೆ.
- 14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
- 15ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.
- 16ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
Cross references
- Micah 2:1 ಮೀಕ 2:1ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
- Romans 16:17 ರೋಮಾಪುರದವರಿಗೆ 16:17ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- Proverbs 6:18–19 ಜ್ಞಾನೋಕ್ತಿಗಳು 6:18–19ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು, ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- Hosea 8:7 ಹೋಶೇಯ 8:7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
- Psalm 36:4 ಕೀರ್ತನೆಗಳು 36:4ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
- Proverbs 26:17–22 ಜ್ಞಾನೋಕ್ತಿಗಳು 26:17–22ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ. ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು-- ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ. ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು. ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು. ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
- Proverbs 2:14 ಜ್ಞಾನೋಕ್ತಿಗಳು 2:14ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು.
- Ezekiel 11:2 ಯೆಹೆಜ್ಕೇಲನು 11:2ಆಮೇಲೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಈ ಜನರು--
- Proverbs 22:8 ಜ್ಞಾನೋಕ್ತಿಗಳು 22:8ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
- Proverbs 16:28–30 ಜ್ಞಾನೋಕ್ತಿಗಳು 16:28–30ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ. ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ. ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
- Proverbs 3:29 ಜ್ಞಾನೋಕ್ತಿಗಳು 3:29ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.