Proverbs · chapter 6 · verse 29
Proverbs 6:29 in Kannada
ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
Tanna nereyavana hendatiyannu kooduvavanu heegeye iruvanu; avalannu muttuva yaavanoo nirapa raadhiyaagi iranu.
Proverbs 6:29 in English
- King James Version (KJV)
- So he that goeth in to his neighbour’s wife; whosoever toucheth her shall not be innocent.
- World English Bible (WEB)
- So is he who goes in to his neighbor’s wife. Whoever touches her will not be unpunished.
- American Standard Version (ASV)
- So he that goeth in to his neighbor’s wife; Whosoever toucheth her shall not be unpunished.
- Bible in Basic English (BBE)
- So it is with him who goes in to his neighbour's wife; he who has anything to do with her will not go free from punishment.
- Darby Translation (DBY)
- So he that goeth in to his neighbour's wife: whosoever toucheth her shall not be innocent.
- Webster's Bible (WBS)
- So he that goeth in to his neighbor's wife; whoever toucheth her shall not be innocent.
- Young's Literal Translation (YLT)
- So [is] he who hath gone in unto the wife of his neighbour, None who doth touch her is innocent.
Read in context
- 27ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ?
- 28ಒಬ್ಬನು ಧಗಧಗಿಸುವ ಕೆಂಡಗಳ ಮೇಲೆ ನಡೆದರೆ ಅವನ ಪಾದಗಳು ಸುಡುವದಿಲ್ಲವೋ?
- 29ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
- 30ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ.
- 31ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
Cross references
- 1 Corinthians 7:1 1 ಕೊರಿಂಥದವರಿಗೆ 7:1ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.
- 2 Samuel 12:9–10 2 ಸಮುವೇಲನು 12:9–10ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Leviticus 20:10 ಯಾಜಕಕಾಂಡ 20:10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- Ezekiel 22:11 ಯೆಹೆಜ್ಕೇಲನು 22:11ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
- Genesis 26:10–11 ಆದಿಕಾಂಡ 26:10–11ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು. ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.
- Proverbs 16:5 ಜ್ಞಾನೋಕ್ತಿಗಳು 16:5ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
- Genesis 12:18–19 ಆದಿಕಾಂಡ 12:18–19ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ? ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
- 2 Samuel 11:3–4 2 ಸಮುವೇಲನು 11:3–4ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು. ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.
- Jeremiah 5:8–9 ಯೆರೆಮೀಯ 5:8–9ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ. ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- 2 Samuel 16:21 2 ಸಮುವೇಲನು 16:21ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.
- Genesis 20:4–7 ಆದಿಕಾಂಡ 20:4–7ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ? ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು. ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ. ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.