Proverbs · chapter 7 · verse 10
Proverbs 7:10 in Kannada
ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.
Igo, veshyala vastravannu dharisi kondu obba kapata streeyu avanannu eduru gondalu.
Proverbs 7:10 in English
- King James Version (KJV)
- And, behold, there met him a woman [with] the attire of an harlot, and subtil of heart.
- World English Bible (WEB)
- Behold, there a woman met him with the attire of a prostitute, and with crafty intent.
- American Standard Version (ASV)
- And, behold, there met him a woman With the attire of a harlot, and wily of heart.
- Bible in Basic English (BBE)
- And the woman came out to him, in the dress of a loose woman, with a designing heart;
- Darby Translation (DBY)
- And behold, there met him a woman in the attire of a harlot, and subtle of heart.
- Webster's Bible (WBS)
- And behold, there met him a woman [with] the attire of a harlot, and subtil of heart.
- Young's Literal Translation (YLT)
- And, lo, a woman to meet him — (A harlot's dress, and watchful of heart,
Read in context
- 8ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ
- 9ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು.
- 10ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.
- 11(ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ.
- 12ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).
Cross references
- Isaiah 3:16–24 ಯೆಶಾಯ 3:16–24ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ, ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು. ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ, ಸರ, ಬಳೆ, ಮುಂಡಾಸ, ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ, ಓಲೆ, ಉಂಗುರ, ಮೂಗುತಿ, ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ, ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು. ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
- 1 Timothy 2:9 1 ತಿಮೊಥೆಯನಿಗೆ 2:9ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
- 2 Corinthians 11:2–3 2 ಕೊರಿಂಥದವರಿಗೆ 11:2–3ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ. ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
- Jeremiah 4:30 ಯೆರೆಮೀಯ 4:30ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
- 2 Kings 9:30 2 ಅರಸುಗಳು 9:30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
- Isaiah 23:16 ಯೆಶಾಯ 23:16ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).
- 2 Kings 9:22 2 ಅರಸುಗಳು 9:22ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
- Genesis 38:14–15 ಆದಿಕಾಂಡ 38:14–15ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು. ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು.
- Revelation 17:3–5 ಪ್ರಕಟನೆ 17:3–5ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- Genesis 3:1 ಆದಿಕಾಂಡ 3:1ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.