Proverbs · chapter 8 · verse 1
Proverbs 8:1 in Kannada
ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ?
Jnyaanavu kooguttadallavo? Mattu tiluvalikeyu tanna svaravannu keluvante maaduttadallavo?
Proverbs 8:1 in English
- King James Version (KJV)
- Doth not wisdom cry? and understanding put forth her voice?
- World English Bible (WEB)
- Doesn’t wisdom cry out? Doesn’t understanding raise her voice?
- American Standard Version (ASV)
- Doth not wisdom cry, And understanding put forth her voice?
- Bible in Basic English (BBE)
- Is not wisdom crying out, and the voice of knowledge sounding?
- Darby Translation (DBY)
- Doth not wisdom cry? and understanding give forth her voice?
- Webster's Bible (WBS)
- Doth not wisdom cry? and understanding put forth her voice?
- Young's Literal Translation (YLT)
- Doth not wisdom call? And understanding give forth her voice?
Read in context
- 1ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ?
- 2ಉನ್ನತ ಸ್ಥಳಗಳ ತುದಿಯ ಲ್ಲಿಯೂ ಹಾದಿಗಳ ಸ್ಥಳಗಳಲ್ಲಿಯೂ ಮಾರ್ಗದ ಲ್ಲಿಯೂ ನಿಂತುಕೊಳ್ಳುತ್ತದೆ.
- 3ದ್ವಾರಗಳ ಬಳಿಯ ಪಟ್ಟ ಣದ ಪ್ರವೇಶದಲ್ಲಿಯೂ ಒಳಗೆ ಬರುವ ಬಾಗಲು ಗಳಲ್ಲಿಯೂ ಆಕೆ ಕೂಗುವದೇನಂದರೆ--
Cross references
- Proverbs 1:20–21 ಜ್ಞಾನೋಕ್ತಿಗಳು 1:20–21ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ. ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--
- Matthew 3:3 ಮತ್ತಾಯನು 3:3ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
- John 7:37 ಯೋಹಾನನು 7:37ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
- Proverbs 9:1–3 ಜ್ಞಾನೋಕ್ತಿಗಳು 9:1–3ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ. ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು. ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- Isaiah 55:1–3 ಯೆಶಾಯ 55:1–3ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Mark 13:10 ಮಾರ್ಕನು 13:10ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ.
- Luke 24:47 ಲೂಕನು 24:47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- Romans 15:18–21 ರೋಮಾಪುರದವರಿಗೆ 15:18–21ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ. ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ. ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ.
- Isaiah 49:1–6 ಯೆಶಾಯ 49:1–6ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ. ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ. ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು. ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು. ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು. ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.