Proverbs · chapter 8 · verse 20
Proverbs 8:20 in Kannada
ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
Neetiya maargadalli nyaayada daarigala madhyadalli naanu nadisuttene.
Proverbs 8:20 in English
- King James Version (KJV)
- I lead in the way of righteousness, in the midst of the paths of judgment:
- World English Bible (WEB)
- I walk in the way of righteousness, in the middle of the paths of justice,
- American Standard Version (ASV)
- I walk in the way of righteousness, In the midst of the paths of justice;
- Bible in Basic English (BBE)
- I go in the road of righteousness, in the way of right judging:
- Darby Translation (DBY)
- I walk in the path of righteousness, in the midst of the paths of judgment:
- Webster's Bible (WBS)
- I lead in the way of righteousness, in the midst of the paths of judgment.
- Young's Literal Translation (YLT)
- In a path of righteousness I cause to walk, In midst of paths of judgment,
Read in context
- 18ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ.
- 19ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
- 20ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
- 21ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.
- 22ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು.
Cross references
- John 10:27–28 ಯೋಹಾನನು 10:27–28ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- Psalm 32:8 ಕೀರ್ತನೆಗಳು 32:8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
- Deuteronomy 5:32 ಧರ್ಮೋಪದೇಶಕಾಂಡ 5:32ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
- Proverbs 4:11–12 ಜ್ಞಾನೋಕ್ತಿಗಳು 4:11–12ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು. ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
- Proverbs 3:6 ಜ್ಞಾನೋಕ್ತಿಗಳು 3:6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Psalm 25:4–5 ಕೀರ್ತನೆಗಳು 25:4–5ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು. ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
- Proverbs 6:22 ಜ್ಞಾನೋಕ್ತಿಗಳು 6:22ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
- Isaiah 2:3 ಯೆಶಾಯ 2:3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Psalm 23:3 ಕೀರ್ತನೆಗಳು 23:3ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.
- Isaiah 49:10 ಯೆಶಾಯ 49:10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
- Revelation 7:17 ಪ್ರಕಟನೆ 7:17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- John 10:3 ಯೋಹಾನನು 10:3ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.