Proverbs · chapter 8 · verse 21
Proverbs 8:21 in Kannada
ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.
Nannannu preetisuvavaru sampattannu baadhyavaagi hondidante naanu avara bokkasa galannu tumbisuvenu.
Proverbs 8:21 in English
- King James Version (KJV)
- That I may cause those that love me to inherit substance; and I will fill their treasures.
- World English Bible (WEB)
- that I may give wealth to those who love me. I fill their treasuries.
- American Standard Version (ASV)
- That I may cause those that love me to inherit substance, And that I may fill their treasuries.
- Bible in Basic English (BBE)
- So that I may give my lovers wealth for their heritage, making their store-houses full.
- Darby Translation (DBY)
- that I may cause those that love me to inherit substance; and I will fill their treasuries.
- Webster's Bible (WBS)
- That I may cause those that love me to inherit substance; and I will fill their treasures.
- Young's Literal Translation (YLT)
- To cause my lovers to inherit substance, Yea, their treasures I fill.
Read in context
- 19ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
- 20ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
- 21ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.
- 22ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು.
- 23ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
Cross references
- 1 Peter 1:4 1 ಪೇತ್ರನು 1:4ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- Proverbs 24:4 ಜ್ಞಾನೋಕ್ತಿಗಳು 24:4ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Genesis 15:14 ಆದಿಕಾಂಡ 15:14ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
- Proverbs 1:13 ಜ್ಞಾನೋಕ್ತಿಗಳು 1:13ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.
- 1 Samuel 2:8 1 ಸಮುವೇಲನು 2:8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Hebrews 10:34 ಇಬ್ರಿಯರಿಗೆ 10:34ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
- John 1:1–18 ಯೋಹಾನನು 1:1–18ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು. ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು. ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ. ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು. ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ. ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು. ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು. ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು. ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು. ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ. ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ. ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು. ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು). ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು. ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು. ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು. ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- Proverbs 8:18 ಜ್ಞಾನೋಕ್ತಿಗಳು 8:18ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ.
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- Proverbs 6:31 ಜ್ಞಾನೋಕ್ತಿಗಳು 6:31ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.