Proverbs · chapter 8 · verse 36
Proverbs 8:36 in Kannada
ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
Aadare nanage virodhavaagi paapamaaduvavanu tanna svanta praanakke kedumaadikolluttaane. Nannannu hagemaaduvavarellaroo maranavannu preetisuttaare.
Proverbs 8:36 in English
- King James Version (KJV)
- But he that sinneth against me wrongeth his own soul: all they that hate me love death.
- World English Bible (WEB)
- But he who sins against me wrongs his own soul. All those who hate me love death.”
- American Standard Version (ASV)
- But he that sinneth against me wrongeth his own soul: All they that hate me love death.
- Bible in Basic English (BBE)
- But he who does evil to me, does wrong to his soul: all my haters are in love with death.
- Darby Translation (DBY)
- but he that sinneth against me doeth violence to his own soul: all they that hate me love death.
- Webster's Bible (WBS)
- But he that sinneth against me wrongeth his own soul: all they that hate me love death.
- Young's Literal Translation (YLT)
- And whoso is missing me, is wronging his soul, All hating me have loved death!
Read in context
- 34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- 35ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- 36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
Cross references
- Proverbs 15:32 ಜ್ಞಾನೋಕ್ತಿಗಳು 15:32ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- Proverbs 1:31 ಜ್ಞಾನೋಕ್ತಿಗಳು 1:31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
- 1 Corinthians 16:22 1 ಕೊರಿಂಥದವರಿಗೆ 16:22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
- John 15:23–24 ಯೋಹಾನನು 15:23–24ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- Proverbs 20:2 ಜ್ಞಾನೋಕ್ತಿಗಳು 20:2ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
- Proverbs 12:1 ಜ್ಞಾನೋಕ್ತಿಗಳು 12:1ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
- Hebrews 10:29 ಇಬ್ರಿಯರಿಗೆ 10:29ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Proverbs 5:11–12 ಜ್ಞಾನೋಕ್ತಿಗಳು 5:11–12ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ-- ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
- John 3:19–20 ಯೋಹಾನನು 3:19–20ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Hebrews 2:3 ಇಬ್ರಿಯರಿಗೆ 2:3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- Ezekiel 18:31 ಯೆಹೆಜ್ಕೇಲನು 18:31ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Proverbs 5:22–23 ಜ್ಞಾನೋಕ್ತಿಗಳು 5:22–23ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು. ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.