Proverbs · chapter 8 · verse 6
Proverbs 8:6 in Kannada
ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು.
Keliri, utkrashta vaada sangatigalannu naanu maataaduvenu; nyaaya vaada sangatigaligaagi nanna tutigalannu tereyu venu.
Proverbs 8:6 in English
- King James Version (KJV)
- Hear; for I will speak of excellent things; and the opening of my lips [shall be] right things.
- World English Bible (WEB)
- Hear, for I will speak excellent things. The opening of my lips is for right things.
- American Standard Version (ASV)
- Hear, for I will speak excellent things; And the opening of my lips shall be right things.
- Bible in Basic English (BBE)
- Give ear, for my words are true, and my lips are open to give out what is upright.
- Darby Translation (DBY)
- Hear, for I will speak excellent things, and the opening of my lips shall be right things.
- Webster's Bible (WBS)
- Hear; for I will speak of excellent things; and the opening of my lips [shall be] right things.
- Young's Literal Translation (YLT)
- Hearken, for noble things I speak, And the opening of my lips [is] uprightness.
Read in context
- 4ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ.
- 5ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
- 6ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು.
- 7ನನ್ನ ಬಾಯಿಯು ಸತ್ಯವನ್ನು ಮಾತಾಡುವದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.
- 8ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯಲ್ಲಿವೆ; ಮೂರ್ಖ ತನವಾಗಲಿ ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.
Cross references
- Matthew 7:28–29 ಮತ್ತಾಯನು 7:28–29ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು. ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- Colossians 1:26 ಕೊಲೊಸ್ಸೆಯವರಿಗೆ 1:26ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
- Matthew 13:35 ಮತ್ತಾಯನು 13:35ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- Proverbs 4:2 ಜ್ಞಾನೋಕ್ತಿಗಳು 4:2ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ.
- Proverbs 23:16 ಜ್ಞಾನೋಕ್ತಿಗಳು 23:16ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.
- 1 Corinthians 2:6–7 1 ಕೊರಿಂಥದವರಿಗೆ 2:6–7ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ. ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
- Proverbs 4:20–22 ಜ್ಞಾನೋಕ್ತಿಗಳು 4:20–22ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು. ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ. ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
- Job 33:1–3 ಯೋಬನು 33:1–3ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ. ಇಗೋ, ಈಗ ನನ್ನ ಬಾಯನ್ನು ತೆರೆದಿದ್ದೇನೆ. ನನ್ನ ನಾಲಿಗೆ ನನ್ನ ಬಾಯಲ್ಲಿ ಮಾತನಾಡುತ್ತದೆ. ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.
- Matthew 5:2–12 ಮತ್ತಾಯನು 5:2–12ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ -- ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು. ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು. ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು. ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು. ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು. ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು. ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು. ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು. ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- Proverbs 22:20–21 ಜ್ಞಾನೋಕ್ತಿಗಳು 22:20–21ಸತ್ಯದ ಮಾತುಗಳ ಸ್ಥಿರತೆಯನ್ನು ನಾನು ನಿನಗೆ ತಿಳಿಯಪಡಿಸುವಂತೆಯೂ ನಿನ್ನ ಕಡೆಗೆ ಕಳುಹಿ ಸಿದವರಿಗೆ ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ?
- Psalm 19:7–11 ಕೀರ್ತನೆಗಳು 19:7–11ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ. ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ. ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು. ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
- Psalm 49:3 ಕೀರ್ತನೆಗಳು 49:3ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.