Proverbs · chapter 9 · verse 1
Proverbs 9:1 in Kannada
ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ.
Jnyaanavembaakeyu tanna maneyannu katti kondiddaale; aakeyu tanna elu kamba galannu kettisiddaale.
Proverbs 9:1 in English
- King James Version (KJV)
- Wisdom hath builded her house, she hath hewn out her seven pillars:
- World English Bible (WEB)
- Wisdom has built her house. She has carved out her seven pillars.
- American Standard Version (ASV)
- Wisdom hath builded her house; She hath hewn out her seven pillars:
- Bible in Basic English (BBE)
- Wisdom has made her house, putting up her seven pillars.
- Darby Translation (DBY)
- Wisdom hath built her house, she hath hewn out her seven pillars;
- Webster's Bible (WBS)
- Wisdom hath built her house, she hath hewn out her seven pillars:
- Young's Literal Translation (YLT)
- Wisdom hath builded her house, She hath hewn out her pillars — seven.
Read in context
- 1ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ.
- 2ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.
- 3ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
Cross references
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- Revelation 3:12 ಪ್ರಕಟನೆ 3:12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- Ephesians 2:20–22 ಎಫೆಸದವರಿಗೆ 2:20–22ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- 1 Peter 2:5–6 1 ಪೇತ್ರನು 2:5–6ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.
- 1 Corinthians 3:9–15 1 ಕೊರಿಂಥದವರಿಗೆ 3:9–15ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ. ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು. ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು. ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು; ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು.
- 1 Kings 7:2–3 1 ಅರಸುಗಳು 7:2–3ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು. ಒಂದೊಂದು ಸಾಲು ಹದಿನೈದು ಕಂಭಗಳಾಗಿ ನಾಲ್ವತ್ತೈದು ಕಂಭ ಗಳ ಮೇಲೆ ಇರುವ ತೊಲೆಗಳು ದೇವದಾರುಗಳಿಂದ ಮುಚ್ಚಲ್ಪಟ್ಟವು.
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- Hebrews 3:3–6 ಇಬ್ರಿಯರಿಗೆ 3:3–6ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ. ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ. ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು. ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- 1 Kings 7:21 1 ಅರಸುಗಳು 7:21ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
- 1 Kings 7:6 1 ಅರಸುಗಳು 7:6ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ಈ ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು.
- 1 Timothy 3:15 1 ತಿಮೊಥೆಯನಿಗೆ 3:15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ