Proverbs · chapter 9 · verse 8
Proverbs 9:8 in Kannada
ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
Parihaasyamaaduvavanu ninnannu hagemaadadante avanannu gadarisabeda. Jnyaaniyannu gadarisidare avanu ninnannu preeti maaduvanu.
Proverbs 9:8 in English
- King James Version (KJV)
- Reprove not a scorner, lest he hate thee: rebuke a wise man, and he will love thee.
- World English Bible (WEB)
- Don’t reprove a scoffer, lest he hate you. Reprove a wise person, and he will love you.
- American Standard Version (ASV)
- Reprove not a scoffer, lest he hate thee: Reprove a wise man, and he will love thee.
- Bible in Basic English (BBE)
- Do not say sharp words to a man of pride, or he will have hate for you; make them clear to a wise man, and you will be dear to him.
- Darby Translation (DBY)
- Reprove not a scorner, lest he hate thee; reprove a wise [man], and he will love thee.
- Webster's Bible (WBS)
- Reprove not a scorner, lest he shall hate thee: rebuke a wise man, and he will love thee.
- Young's Literal Translation (YLT)
- Reprove not a scorner, lest he hate thee, Give reproof to the wise, and he loveth thee.
Read in context
- 6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- 7ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.
- 8ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
- 9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- 10ಪರಿಶುದ್ಧರ ತಿಳುವಳಿಕೆಯೇ ವಿವೇಕವು.
Cross references
- Proverbs 13:18 ಜ್ಞಾನೋಕ್ತಿಗಳು 13:18ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
- Psalm 141:5 ಕೀರ್ತನೆಗಳು 141:5ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
- Proverbs 23:9 ಜ್ಞಾನೋಕ್ತಿಗಳು 23:9ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು.
- Proverbs 15:12 ಜ್ಞಾನೋಕ್ತಿಗಳು 15:12ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.
- Matthew 7:6 ಮತ್ತಾಯನು 7:6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- Proverbs 28:23 ಜ್ಞಾನೋಕ್ತಿಗಳು 28:23ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
- Leviticus 19:17 ಯಾಜಕಕಾಂಡ 19:17ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Hebrews 6:4–8 ಇಬ್ರಿಯರಿಗೆ 6:4–8ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ. ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- 2 Peter 3:15–16 2 ಪೇತ್ರನು 3:15–16ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು. ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
- 2 Samuel 12:7–14 2 ಸಮುವೇಲನು 12:7–14ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು. ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು. ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು. ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.