Psalms · chapter 1 · verse 3
Psalm 1:3 in Kannada
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
Avanu tanna kaaladalli tanna phalakoduvantha, ele baadadantha, neerina holegala baliyalli nedalpattantha marada haagiruvanu; avanu maadu vadellaa saphalavaaguvadu.
Psalm 1:3 in English
- King James Version (KJV)
- And he shall be like a tree planted by the rivers of water, that bringeth forth his fruit in his season; his leaf also shall not wither; and whatsoever he doeth shall prosper.
- World English Bible (WEB)
- He will be like a tree planted by the streams of water, that produces its fruit in its season, whose leaf also does not wither. Whatever he does shall prosper.
- American Standard Version (ASV)
- And he shall be like a tree planted by the streams of water, That bringeth forth its fruit in its season, Whose leaf also doth not wither; And whatsoever he doeth shall prosper.
- Bible in Basic English (BBE)
- He will be like a tree planted by the rivers of water, which gives its fruit at the right time, whose leaves will ever be green; and he will do well in all his undertakings.
- Darby Translation (DBY)
- And he [is] as a tree planted by brooks of water, which giveth its fruit in its season, and whose leaf fadeth not; and all that he doeth prospereth.
- Webster's Bible (WBS)
- And he shall be like a tree planted by the rivers of water, that bringeth forth its fruit in season; its leaf also shall not wither; and whatever he doeth shall prosper.
- Young's Literal Translation (YLT)
- And he hath been as a tree, Planted by rivulets of water, That giveth its fruit in its season, And its leaf doth not wither, And all that he doth he causeth to prosper.
Read in context
- 1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- 2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- 3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- 4ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
- 5ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
Cross references
- Jeremiah 17:8 ಯೆರೆಮೀಯ 17:8ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- Ezekiel 47:12 ಯೆಹೆಜ್ಕೇಲನು 47:12ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
- Psalm 92:14 ಕೀರ್ತನೆಗಳು 92:14ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- John 15:6 ಯೋಹಾನನು 15:6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Ezekiel 19:10 ಯೆಹೆಜ್ಕೇಲನು 19:10ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ; ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ.
- Genesis 39:23 ಆದಿಕಾಂಡ 39:23ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- Joshua 1:7–8 ಯೆಹೋಶುವ 1:7–8ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ. ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
- Revelation 22:2 ಪ್ರಕಟನೆ 22:2ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
- Ezekiel 17:8 ಯೆಹೆಜ್ಕೇಲನು 17:8ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು.
- Matthew 13:6 ಮತ್ತಾಯನು 13:6ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
- Psalm 128:2 ಕೀರ್ತನೆಗಳು 128:2ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
- 2 Chronicles 31:21 2 ಪೂರ್ವಕಾಲವೃತ್ತಾಂತ 31:21ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.