Psalms · chapter 10 · verse 2
Psalm 10:2 in Kannada
ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
Dushtaru garva dinda deenanannu hinsisuttaare; avaru kalpisida yuktigalalli taave hidiyalpadali.
Psalm 10:2 in English
- King James Version (KJV)
- The wicked in [his] pride doth persecute the poor: let them be taken in the devices that they have imagined.
- World English Bible (WEB)
- In arrogance, the wicked hunt down the weak. They are caught in the schemes that they devise.
- American Standard Version (ASV)
- In the pride of the wicked the poor is hotly pursued; Let them be taken in the devices that they have conceived.
- Bible in Basic English (BBE)
- The evil-doer in his pride is cruel to the poor; let him be taken by the tricks of his invention.
- Darby Translation (DBY)
- The wicked, in his pride, doth hotly pursue the afflicted. They shall be taken in the devices that they have imagined.
- Webster's Bible (WBS)
- The wicked in [his] pride doth persecute the poor: let them be taken in the devices that they have imagined.
- Young's Literal Translation (YLT)
- Through the pride of the wicked, Is the poor inflamed, They are caught in devices that they devised.
Read in context
- 1ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?
- 2ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
- 3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
- 4ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
Cross references
- Psalm 59:12 ಕೀರ್ತನೆಗಳು 59:12ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.
- Psalm 36:11 ಕೀರ್ತನೆಗಳು 36:11ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
- Psalm 7:16 ಕೀರ್ತನೆಗಳು 7:16ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Proverbs 5:22 ಜ್ಞಾನೋಕ್ತಿಗಳು 5:22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- Psalm 31:18 ಕೀರ್ತನೆಗಳು 31:18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
- Psalm 119:122 ಕೀರ್ತನೆಗಳು 119:122ಒಳ್ಳೇದಕ್ಕಾಗಿ ನಿನ್ನ ಸೇವಕನಿಗೆ ಹೊಣೆಯಾಗು; ಅಹಂಕಾರಿಗಳು ನನಗೆ ಹಿಂಸೆ ಮಾಡದಿರಲಿ.
- Psalm 140:5 ಕೀರ್ತನೆಗಳು 140:5ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- Isaiah 10:12–13 ಯೆಶಾಯ 10:12–13ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು. ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
- Psalm 119:69 ಕೀರ್ತನೆಗಳು 119:69ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
- Psalm 119:85 ಕೀರ್ತನೆಗಳು 119:85ನಿನ್ನ ನ್ಯಾಯ ಪ್ರಮಾಣದ ಪ್ರಕಾರವಾಗಿರದ ಅಹಂಕಾರಿಗಳು ನನಗೆ ಕುಣಿಗಳನ್ನು ಅಗೆದಿದ್ದಾರೆ.
- Isaiah 14:13 ಯೆಶಾಯ 14:13ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
- Jeremiah 43:2 ಯೆರೆಮೀಯ 43:2ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.