Psalms · chapter 100 · verse 5
Psalm 100:5 in Kannada
ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
Kartanu olleyavanu; aatana karuneyu yugayugakkoo aatana satyateyu talatalaantarakkoo iruvavu.
Psalm 100:5 in English
- King James Version (KJV)
- For the LORD [is] good; his mercy [is] everlasting; and his truth [endureth] to all generations.
- World English Bible (WEB)
- For the LORD is good. His loving kindness endures forever, his faithfulness to all generations.
- American Standard Version (ASV)
- For Jehovah is good; his lovingkindness [endureth] for ever, And his faithfulness unto all generations.
- Bible in Basic English (BBE)
- For the Lord is good, and his mercy is never-ending; his faith is unchanging through all generations.
- Darby Translation (DBY)
- For Jehovah is good; his loving-kindness [endureth] for ever; and his faithfulness from generation to generation.
- Webster's Bible (WBS)
- For the LORD [is] good; his mercy [is] everlasting; and his truth [endureth] to all generations.
- Young's Literal Translation (YLT)
- For good [is] Jehovah, to the age His kindness, And to generation and generation His faithfulness!
Read in context
- 3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- 4ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- 5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
Cross references
- Psalm 106:1 ಕೀರ್ತನೆಗಳು 106:1ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
- Psalm 86:5 ಕೀರ್ತನೆಗಳು 86:5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
- Psalm 107:1 ಕೀರ್ತನೆಗಳು 107:1ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
- 1 Chronicles 16:34 1 ಪೂರ್ವಕಾಲವೃತ್ತಾಂತ 16:34ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
- Psalm 36:5 ಕೀರ್ತನೆಗಳು 36:5ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
- Jeremiah 33:11 ಯೆರೆಮೀಯ 33:11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- Psalm 136:1–26 ಕೀರ್ತನೆಗಳು 136:1–26ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ. ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ. ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ. ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ. ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- Luke 1:50 ಲೂಕನು 1:50ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
- Nahum 1:7 ನಹೂಮ 1:7ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
- Psalm 118:1–4 ಕೀರ್ತನೆಗಳು 118:1–4ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ. ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ. ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ. ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ.
- Psalm 119:68 ಕೀರ್ತನೆಗಳು 119:68ನೀನು ಒಳ್ಳೆಯ ವನೂ ಒಳ್ಳೇದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಯಮಗಳನ್ನು ನನಗೆ ಬೋಧಿಸು.