Psalms · chapter 101 · verse 3
Psalm 101:3 in Kannada
ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
Ketta kaarya vannu nanna kannugala munde naanu iduvadilla; akramagaarara kelasavannu hage maaduttene; adu nanage antikolladu.
Psalm 101:3 in English
- King James Version (KJV)
- I will set no wicked thing before mine eyes: I hate the work of them that turn aside; [it] shall not cleave to me.
- World English Bible (WEB)
- I will set no vile thing before my eyes. I hate the deeds of faithless men. They will not cling to me.
- American Standard Version (ASV)
- I will set no base thing before mine eyes: I hate the work of them that turn aside; It shall not cleave unto me.
- Bible in Basic English (BBE)
- I will not put any evil thing before my eyes; I am against all turning to one side; I will not have it near me.
- Darby Translation (DBY)
- I will set no thing of Belial before mine eyes: I hate the work of them that turn aside; it shall not cleave to me.
- Webster's Bible (WBS)
- I will set no wicked thing before my eyes: I hate the work of them that turn aside; it shall not cleave to me.
- Young's Literal Translation (YLT)
- I set not before mine eyes a worthless thing, The work of those turning aside I have hated, It adhereth not to me.
Read in context
- 1ಕರುಣೆ ನೀತಿಗಳನ್ನು ಕುರಿತು ಹಾಡುವೆನು; ಓ ಕರ್ತನೇ, ನಿನ್ನನ್ನು ಕೀರ್ತಿ ಸುವೆನು.
- 2ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
- 3ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
- 4ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ.
- 5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
Cross references
- Psalm 119:37 ಕೀರ್ತನೆಗಳು 119:37ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
- Job 31:1 ಯೋಬನು 31:1ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
- James 1:13–15 ಯಾಕೋಬನು 1:13–15ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ. ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- 2 Samuel 11:2–3 2 ಸಮುವೇಲನು 11:2–3ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು. ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
- Proverbs 6:25 ಜ್ಞಾನೋಕ್ತಿಗಳು 6:25ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
- Matthew 5:28 ಮತ್ತಾಯನು 5:28ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
- Psalm 40:4 ಕೀರ್ತನೆಗಳು 40:4ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
- 1 Samuel 12:20–21 1 ಸಮುವೇಲನು 12:20–21ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ. ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.
- Exodus 20:17 ವಿಮೋಚನಕಾಂಡ 20:17ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- Deuteronomy 15:9 ಧರ್ಮೋಪದೇಶಕಾಂಡ 15:9ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?