Psalms · chapter 102 · verse 10
Psalm 102:10 in Kannada
ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ;
Nannannu neenu etti kedavi haakiddee;
Psalm 102:10 in English
- King James Version (KJV)
- Because of thine indignation and thy wrath: for thou hast lifted me up, and cast me down.
- World English Bible (WEB)
- because of your indignation and your wrath; for you have taken me up and thrown me away.
- American Standard Version (ASV)
- Because of thine indignation and thy wrath: For thou hast taken me up, and cast me away.
- Bible in Basic English (BBE)
- Because of your passion and your wrath, for I have been lifted up and then made low by you.
- Darby Translation (DBY)
- Because of thine indignation and thy wrath; for thou hast lifted me up, and cast me down.
- Webster's Bible (WBS)
- Because of thy indignation and thy wrath: for thou hast lifted me up, and cast me down.
- Young's Literal Translation (YLT)
- From Thine indignation and Thy wrath, For Thou hast lifted me up, And dost cast me down.
Read in context
- 8ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ.
- 9ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
- 10ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ;
- 11ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.
- 12ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
Cross references
- Psalm 38:3 ಕೀರ್ತನೆಗಳು 38:3ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
- 2 Corinthians 4:9 2 ಕೊರಿಂಥದವರಿಗೆ 4:9ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
- Psalm 90:7–9 ಕೀರ್ತನೆಗಳು 90:7–9ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ. ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ. ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Psalm 147:6 ಕೀರ್ತನೆಗಳು 147:6ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.
- Lamentations 3:39–42 ಪ್ರಲಾಪಗಳು 3:39–42ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ? ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ. ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ. ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ.
- Lamentations 1:18 ಪ್ರಲಾಪಗಳು 1:18ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
- Lamentations 5:16 ಪ್ರಲಾಪಗಳು 5:16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
- Psalm 73:18–20 ಕೀರ್ತನೆಗಳು 73:18–20ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Daniel 9:8–14 ದಾನಿಯೇಲನು 9:8–14ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ. ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
- Psalm 38:18 ಕೀರ್ತನೆಗಳು 38:18ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
- Psalm 39:11 ಕೀರ್ತನೆಗಳು 39:11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.