Psalms · chapter 102 · verse 13
Psalm 102:13 in Kannada
ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
Neenu eddu, cheeyonannu kani karisuvi; yaakandare adannu karunisuvadakke kaalavaayitu; haudu nirnayisida samayavu bandide.
Psalm 102:13 in English
- King James Version (KJV)
- Thou shalt arise, [and] have mercy upon Zion: for the time to favour her, yea, the set time, is come.
- World English Bible (WEB)
- You will arise and have mercy on Zion, for it is time to have pity on her. Yes, the set time has come.
- American Standard Version (ASV)
- Thou wilt arise, and have mercy upon Zion; For it is time to have pity upon her, Yea, the set time is come.
- Bible in Basic English (BBE)
- You will again get up and have mercy on Zion: for the time has come for her to be comforted.
- Darby Translation (DBY)
- Thou wilt rise up, thou wilt have mercy upon Zion: for it is the time to be gracious to her, for the set time is come.
- Webster's Bible (WBS)
- Thou shalt arise, [and] have mercy upon Zion: for the time to favor her, yes, the set time, is come.
- Young's Literal Translation (YLT)
- Thou — Thou risest — Thou pitiest Zion, For the time to favour her, For the appointed time hath come.
Read in context
- 11ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.
- 12ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
- 13ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
- 14ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.
- 15ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
Cross references
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- Psalm 44:26 ಕೀರ್ತನೆಗಳು 44:26ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
- Isaiah 60:1 ಯೆಶಾಯ 60:1ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
- Isaiah 40:2 ಯೆಶಾಯ 40:2ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- Psalm 69:35–36 ಕೀರ್ತನೆಗಳು 69:35–36ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು. ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
- Zechariah 2:10–12 ಜೆಕರ್ಯ 2:10–12ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ. ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ. ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
- Isaiah 60:10–14 ಯೆಶಾಯ 60:10–14ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ. ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು. ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು. ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- 2 Peter 3:8 2 ಪೇತ್ರನು 3:8ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.
- Revelation 11:15–18 ಪ್ರಕಟನೆ 11:15–18ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು. ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು-- ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Acts 1:7 ಅಪೊಸ್ತಲರ ಕೃತ್ಯಗಳು 1:7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
- Jeremiah 31:10–12 ಯೆರೆಮೀಯ 31:10–12ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು. ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ. ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
- Ezra 1:1–11 ಎಜ್ರನು 1:1–11ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ-- ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು). ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು. ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು. ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು. ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು. ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು. ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು, ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು. ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.