Psalms · chapter 102 · verse 15
Psalm 102:15 in Kannada
ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
Janaangavu kartana hesarigoo bhooraajarellaru ninna mahimegoo bhayapaduvaru.
Psalm 102:15 in English
- King James Version (KJV)
- So the heathen shall fear the name of the LORD, and all the kings of the earth thy glory.
- World English Bible (WEB)
- So the nations will fear the LORD’s name, all the kings of the earth your glory.
- American Standard Version (ASV)
- So the nations shall fear the name of Jehovah, And all the kings of the earth thy glory.
- Bible in Basic English (BBE)
- So the nations will give honour to the name of the Lord, and all the kings of the earth will be in fear of his glory:
- Darby Translation (DBY)
- And the nations shall fear the name of Jehovah, and all the kings of the earth thy glory.
- Webster's Bible (WBS)
- So the heathen shall fear the name of the LORD: and all the kings of the earth thy glory.
- Young's Literal Translation (YLT)
- And nations fear the name of Jehovah, And all kings of the earth Thine honour,
Read in context
- 13ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
- 14ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.
- 15ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
- 16ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
- 17ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
Cross references
- 1 Kings 8:43 1 ಅರಸುಗಳು 8:43ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
- Psalm 138:4 ಕೀರ್ತನೆಗಳು 138:4ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು.
- Isaiah 60:3–22 ಯೆಶಾಯ 60:3–22ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ. ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು. ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು. ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು. ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ. ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ. ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು. ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ. ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು. ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು. ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Zechariah 8:20–23 ಜೆಕರ್ಯ 8:20–23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು; ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು. ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Psalm 86:9 ಕೀರ್ತನೆಗಳು 86:9ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Psalm 72:11 ಕೀರ್ತನೆಗಳು 72:11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Psalm 68:31–32 ಕೀರ್ತನೆಗಳು 68:31–32ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು. ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ.
- Psalm 67:2–4 ಕೀರ್ತನೆಗಳು 67:2–4ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ. ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
- Revelation 21:24 ಪ್ರಕಟನೆ 21:24ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
- Isaiah 55:5 ಯೆಶಾಯ 55:5ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.