Psalms · chapter 102 · verse 17
Psalm 102:17 in Kannada
ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
Dikkilladavana praarthanege kivigoduttaane; avara praarthaneyannu tiraskari suvadilla.
Psalm 102:17 in English
- King James Version (KJV)
- He will regard the prayer of the destitute, and not despise their prayer.
- World English Bible (WEB)
- He has responded to the prayer of the destitute, and has not despised their prayer.
- American Standard Version (ASV)
- He hath regarded the prayer of the destitute, And hath not despised their prayer.
- Bible in Basic English (BBE)
- When he has given ear to the prayer of the poor, and has not put his request on one side.
- Darby Translation (DBY)
- He will regard the prayer of the destitute one, and not despise their prayer.
- Webster's Bible (WBS)
- He will regard the prayer of the destitute, and not despise their prayer.
- Young's Literal Translation (YLT)
- He turned unto the prayer of the destitute, And He hath not despised their prayer.
Read in context
- 15ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
- 16ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
- 17ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
- 18ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು.
- 19ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ
Cross references
- Nehemiah 1:6 ನೆಹೆಮೀಯ 1:6ನಿನ್ನ ಸೇವಕರಾದ ಇಸ್ರಾಯೇಲ್ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ.
- Psalm 22:24 ಕೀರ್ತನೆಗಳು 22:24ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
- Deuteronomy 4:29 ಧರ್ಮೋಪದೇಶಕಾಂಡ 4:29ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
- Psalm 9:18 ಕೀರ್ತನೆಗಳು 9:18ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
- Jeremiah 29:11–14 ಯೆರೆಮೀಯ 29:11–14ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ. ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ. ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- Psalm 72:12 ಕೀರ್ತನೆಗಳು 72:12ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
- Deuteronomy 32:36 ಧರ್ಮೋಪದೇಶಕಾಂಡ 32:36ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
- Daniel 9:3–21 ದಾನಿಯೇಲನು 9:3–21ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು. ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ, ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ. ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ. ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ. ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ. ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ. ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು. ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು. ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
- Psalm 69:23 ಕೀರ್ತನೆಗಳು 69:23ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.