Psalms · chapter 102 · verse 2
Psalm 102:2 in Kannada
ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು.
Nanage ikkattu iruva divasadalli ninna mukhavannu nanage maremaadabeda; ninna kiviyannu nanna kadege tirugisu; naanu kareyuva divasadalli bega nanage uttara kodu.
Psalm 102:2 in English
- King James Version (KJV)
- Hide not thy face from me in the day [when] I am in trouble; incline thine ear unto me: in the day [when] I call answer me speedily.
- World English Bible (WEB)
- Don’t hide your face from me in the day of my distress. Turn your ear to me. Answer me quickly in the day when I call.
- American Standard Version (ASV)
- Hide not thy face from me in the day of my distress: Incline thine ear unto me; In the day when I call answer me speedily.
- Bible in Basic English (BBE)
- Let not your face be veiled from me in the day of my trouble; give ear to me, and let my cry be answered quickly.
- Darby Translation (DBY)
- Hide not thy face from me: in the day of my trouble, incline thine ear unto me; in the day I call, answer me speedily.
- Webster's Bible (WBS)
- Hide not thy face from me in the day [when] I am in trouble; incline thy ear to me: in the day [when] I call, answer me speedily.
- Young's Literal Translation (YLT)
- Hide not Thou Thy face from me, In a day of mine adversity, Incline unto me Thine ear, In the day I call, haste, answer me.
Read in context
- 1ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಯು ನಿನ್ನ ಬಳಿಗೆ ಸೇರಲಿ.
- 2ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು.
- 3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
- 4ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
Cross references
- Psalm 69:17 ಕೀರ್ತನೆಗಳು 69:17ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.
- Psalm 27:9 ಕೀರ್ತನೆಗಳು 27:9ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
- Isaiah 8:17 ಯೆಶಾಯ 8:17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
- Psalm 70:1 ಕೀರ್ತನೆಗಳು 70:1ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು.
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Psalm 71:2 ಕೀರ್ತನೆಗಳು 71:2ನಿನ್ನ ನೀತಿಯಲ್ಲಿ ನನ್ನನ್ನು ಬಿಡಿಸಿ ನನ್ನನ್ನು ತಪ್ಪಿಸು; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ ನನ್ನನ್ನು ರಕ್ಷಿಸು.
- Psalm 104:29 ಕೀರ್ತನೆಗಳು 104:29ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
- Psalm 88:2–18 ಕೀರ್ತನೆಗಳು 88:2–18ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು. ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ. ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ. ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ. ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ. ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ. ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು. ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ. ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ. ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ? ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ? ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು. ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ? ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ. ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು. ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- Acts 12:5–25 ಅಪೊಸ್ತಲರ ಕೃತ್ಯಗಳು 12:5–25ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು. ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು. ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು. ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು. ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು. ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು. ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು. ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು. ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು. ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು. ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು. ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು. ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು. ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು. ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು. ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು. ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು. ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು. ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು. ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- Psalm 40:13 ಕೀರ್ತನೆಗಳು 40:13ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.
- Psalm 22:19 ಕೀರ್ತನೆಗಳು 22:19ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.