Psalms · chapter 102 · verse 23
Psalm 102:23 in Kannada
ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.
Aatanu nanna shaktiyannu maargadalli kundisi nanna divasagalannu kadime maadidanu.
Psalm 102:23 in English
- King James Version (KJV)
- He weakened my strength in the way; he shortened my days.
- World English Bible (WEB)
- He weakened my strength along the course. He shortened my days.
- American Standard Version (ASV)
- He weakened my strength in the way; He shortened my days.
- Bible in Basic English (BBE)
- He has taken my strength from me in the way; he has made short my days.
- Darby Translation (DBY)
- He weakened my strength in the way, he shortened my days.
- Webster's Bible (WBS)
- He weakened my strength in the way; he shortened my days.
- Young's Literal Translation (YLT)
- He hath humbled in the way my power, He hath shortened my days.
Read in context
- 21ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ
- 22ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ.
- 23ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.
- 24ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು.
- 25ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
Cross references
- 1 Timothy 4:1–3 1 ತಿಮೊಥೆಯನಿಗೆ 4:1–3ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- Psalm 89:38–47 ಕೀರ್ತನೆಗಳು 89:38–47ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ; ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ. ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ. ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ. ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ. ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ. ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ. ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ. ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ? ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
- 2 Thessalonians 2:3–12 2 ಥೆಸಲೊನೀಕದವರಿಗೆ 2:3–12ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ; ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ. ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ? ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ. ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು; ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Revelation 11:2–19 ಪ್ರಕಟನೆ 11:2–19ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು. ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು. ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ. ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು. ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು. ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು. ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು. ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು. ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು. ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು. ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು. ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ. ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು. ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು-- ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು. ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Job 21:21 ಯೋಬನು 21:21ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ?
- 2 Timothy 3:1–17 2 ತಿಮೊಥೆಯನಿಗೆ 3:1–17ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ. ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು. ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ. ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು. ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ. ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು. ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು. ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು. ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು. ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು. ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.