Psalms · chapter 102 · verse 8
Psalm 102:8 in Kannada
ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ.
Dinavellaa nanna shatrugalu nannannu nindisuttaare; nanna mele kopisikolluvavaru nanage virodha vaagi aane iduttaare.
Psalm 102:8 in English
- King James Version (KJV)
- Mine enemies reproach me all the day; [and] they that are mad against me are sworn against me.
- World English Bible (WEB)
- My enemies reproach me all day. Those who are mad at me use my name as a curse.
- American Standard Version (ASV)
- Mine enemies reproach me all the day; They that are mad against me do curse by me.
- Bible in Basic English (BBE)
- My haters say evil of me all day; those who are violent against me make use of my name as a curse.
- Darby Translation (DBY)
- Mine enemies reproach me all the day; they that are mad against me swear by me.
- Webster's Bible (WBS)
- My enemies reproach me all the day; [and] they that are enraged against me are sworn against me.
- Young's Literal Translation (YLT)
- All the day mine enemies reproached me, Those mad at me have sworn against me.
Read in context
- 6ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ.
- 7ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.
- 8ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ.
- 9ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
- 10ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ;
Cross references
- Acts 26:11 ಅಪೊಸ್ತಲರ ಕೃತ್ಯಗಳು 26:11ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
- Isaiah 65:15 ಯೆಶಾಯ 65:15ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
- Acts 23:12–35 ಅಪೊಸ್ತಲರ ಕೃತ್ಯಗಳು 23:12–35ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು. ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು. ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ. ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು. ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು. ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು. ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು. ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ. ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು. ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ, ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು. ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು:- ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ. ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು. ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು. ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು. ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ ಆಗ ತಮಗೆ ಅಪ್ಪಣೆಯಾದಂತೆ ಸೈನಿಕರು ಪೌಲನನ್ನು ರಾತ್ರಿಯ ಸಮಯದಲ್ಲಿ ಅಂತಿಪತ್ರಿಗೆ ಕರೆದುಕೊಂಡು ಹೋದರು. ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು. ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು. ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು. ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
- Romans 15:3 ರೋಮಾಪುರದವರಿಗೆ 15:3ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
- Psalm 69:9–10 ಕೀರ್ತನೆಗಳು 69:9–10ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ. ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
- Psalm 69:20 ಕೀರ್ತನೆಗಳು 69:20ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
- Psalm 89:51 ಕೀರ್ತನೆಗಳು 89:51ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
- Psalm 2:1 ಕೀರ್ತನೆಗಳು 2:1ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
- Psalm 31:11–13 ಕೀರ್ತನೆಗಳು 31:11–13ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು. ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ. ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
- Acts 7:54 ಅಪೊಸ್ತಲರ ಕೃತ್ಯಗಳು 7:54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
- Luke 6:11 ಲೂಕನು 6:11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Psalm 55:3 ಕೀರ್ತನೆಗಳು 55:3ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.