Psalms · chapter 103 · verse 13
Psalm 103:13 in Kannada
ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
Tandeyu makkala mele antahkarana paduva prakaara kartanu tanage bhayapaduvavara mele antahkaranapaduvavanaagiddaane.
Psalm 103:13 in English
- King James Version (KJV)
- Like as a father pitieth [his] children, [so] the LORD pitieth them that fear him.
- World English Bible (WEB)
- Like a father has compassion on his children, so the LORD has compassion on those who fear him.
- American Standard Version (ASV)
- Like as a father pitieth his children, So Jehovah pitieth them that fear him.
- Bible in Basic English (BBE)
- As a father has pity on his children, so the Lord has pity on his worshippers.
- Darby Translation (DBY)
- As a father pitieth [his] children, so Jehovah pitieth them that fear him.
- Webster's Bible (WBS)
- Like as a father pitieth [his] children, [so] the LORD pitieth them that fear him.
- Young's Literal Translation (YLT)
- As a father hath mercy on sons, Jehovah hath mercy on those fearing Him.
Read in context
- 11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
- 12ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
- 13ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
- 14ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
- 15ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.
Cross references
- Luke 11:11–12 ಲೂಕನು 11:11–12ನಿಮ್ಮಲ್ಲಿ ತಂದೆ ಯಾಗಿರುವ ಯಾವನಾದರೂ ತನ್ನ ಮಗನು ರೊಟ್ಟಿ ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ವಿಾನನ್ನು ಕೇಳಿದರೆ ವಿಾನಿಗೆ ಬದಲಾಗಿ ಅವನಿಗೆ ಹಾವನ್ನು ಕೊಡುವನೇ? ಇಲ್ಲವೆ ಅವನು ಮೊಟ್ಟೆ ಯನ್ನು ಕೇಳಿದರೆ ಅವನಿಗೆ ಚೇಳನ್ನು ಕೊಡುವನೇ?
- Hebrews 12:5–11 ಇಬ್ರಿಯರಿಗೆ 12:5–11ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ; ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ? ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ? ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
- Luke 15:21–22 ಲೂಕನು 15:21–22ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು. ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- Jeremiah 31:20 ಯೆರೆಮೀಯ 31:20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Proverbs 3:12 ಜ್ಞಾನೋಕ್ತಿಗಳು 3:12ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
- Jeremiah 31:9 ಯೆರೆಮೀಯ 31:9ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Malachi 3:16–17 ಮಲಾಕಿಯ 3:16–17ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು. ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Psalm 147:11 ಕೀರ್ತನೆಗಳು 147:11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- Matthew 6:32 ಮತ್ತಾಯನು 6:32(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
- Isaiah 63:15–16 ಯೆಶಾಯ 63:15–16ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ? ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.