Psalms · chapter 103 · verse 22
Psalm 103:22 in Kannada
ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
Aatana aalikeya ellaa sthalagalalli iruva aatana ellaa kelasagale. Kartanannu stutisiri. Nanna manave, kartanannu stutisu.
Psalm 103:22 in English
- King James Version (KJV)
- Bless the LORD, all his works in all places of his dominion: bless the LORD, O my soul.
- World English Bible (WEB)
- Praise the LORD, all you works of his, in all places of his dominion. Praise the LORD, my soul!
- American Standard Version (ASV)
- Bless Jehovah, all ye his works, In all places of his dominion: Bless Jehovah, O my soul.
- Bible in Basic English (BBE)
- Give praise to the Lord, all his works, in all places under his rule: give praise to the Lord, O my soul.
- Darby Translation (DBY)
- Bless Jehovah, all his works, in all places of his dominion. Bless Jehovah, O my soul!
- Webster's Bible (WBS)
- Bless the LORD, all his works in all places of his dominion: bless the LORD, O my soul.
- Young's Literal Translation (YLT)
- Bless Jehovah, all ye His works, In all places of His dominion. Bless, O my soul, Jehovah!
Read in context
- 20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
- 21ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- 22ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
Cross references
- Isaiah 49:13 ಯೆಶಾಯ 49:13ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
- Isaiah 42:10–12 ಯೆಶಾಯ 42:10–12ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ. ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ, ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
- Psalm 145:10 ಕೀರ್ತನೆಗಳು 145:10ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
- Psalm 148:3–12 ಕೀರ್ತನೆಗಳು 148:3–12ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ. ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು. ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ. ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ, ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ, ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ, ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ, ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ, ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ,
- Psalm 150:6 ಕೀರ್ತನೆಗಳು 150:6ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- Isaiah 44:23 ಯೆಶಾಯ 44:23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
- Revelation 5:12–14 ಪ್ರಕಟನೆ 5:12–14ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Isaiah 43:20 ಯೆಶಾಯ 43:20ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
- Psalm 104:35 ಕೀರ್ತನೆಗಳು 104:35ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
- Psalm 146:1 ಕೀರ್ತನೆಗಳು 146:1ಕರ್ತನನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಕರ್ತನನ್ನು ಸ್ತುತಿಸು.
- Psalm 103:1 ಕೀರ್ತನೆಗಳು 103:1ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
- Psalm 104:1 ಕೀರ್ತನೆಗಳು 104:1ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ.