Psalms · chapter 103 · verse 6
Psalm 103:6 in Kannada
ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ.
Kuggisalpaduvavarellarige kartanu neetiyannoo nyaayavannoo nadisuttaane.
Psalm 103:6 in English
- King James Version (KJV)
- The LORD executeth righteousness and judgment for all that are oppressed.
- World English Bible (WEB)
- The LORD executes righteous acts, and justice for all who are oppressed.
- American Standard Version (ASV)
- Jehovah executeth righteous acts, And judgments for all that are oppressed.
- Bible in Basic English (BBE)
- The Lord gives decisions in righteousness for all who are in trouble.
- Darby Translation (DBY)
- Jehovah executeth righteousness and justice for all that are oppressed.
- Webster's Bible (WBS)
- The LORD executeth righteousness and judgment for all that are oppressed.
- Young's Literal Translation (YLT)
- Jehovah is doing righteousness and judgments For all the oppressed.
Read in context
- 4ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
- 5ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ.
- 6ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ.
- 7ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು.
- 8ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ.
Cross references
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Psalm 9:9 ಕೀರ್ತನೆಗಳು 9:9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- Psalm 146:7 ಕೀರ್ತನೆಗಳು 146:7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
- Psalm 72:12 ಕೀರ್ತನೆಗಳು 72:12ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
- Proverbs 22:22–23 ಜ್ಞಾನೋಕ್ತಿಗಳು 22:22–23ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ. ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
- Deuteronomy 24:14–15 ಧರ್ಮೋಪದೇಶಕಾಂಡ 24:14–15ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
- Psalm 109:31 ಕೀರ್ತನೆಗಳು 109:31ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
- Micah 2:1–3 ಮೀಕ 2:1–3ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ. ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ. ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.
- James 2:6 ಯಾಕೋಬನು 2:6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- Micah 3:2–4 ಮೀಕ 3:2–4ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ. ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
- James 5:1–6 ಯಾಕೋಬನು 5:1–6ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ. ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ. ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.