Psalms · chapter 104 · verse 15
Psalm 104:15 in Kannada
ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
Draakshaarasavu manushyana hrudayavannu santosha padisuttade; enneyu avana mukhavannu prakaa shisuvante maaduttade; rottiyu manushyana hrudayavannu balapadisuttade.
Psalm 104:15 in English
- King James Version (KJV)
- And wine [that] maketh glad the heart of man, [and] oil to make [his] face to shine, and bread [which] strengtheneth man’s heart.
- World English Bible (WEB)
- wine that makes the heart of man glad, oil to make his face to shine, and bread that strengthens man’s heart.
- American Standard Version (ASV)
- And wine that maketh glad the heart of man, [And] oil to make his face to shine, And bread that strengtheneth man’s heart.
- Bible in Basic English (BBE)
- And wine to make glad the heart of man, and oil to make his face shining, and bread giving strength to his heart.
- Darby Translation (DBY)
- And wine which gladdeneth the heart of man; making [his] face shine with oil; and with bread he strengtheneth man's heart.
- Webster's Bible (WBS)
- And wine [that] maketh glad the heart of man, [and] oil to make [his] face to shine, and bread [which] strengtheneth man's heart.
- Young's Literal Translation (YLT)
- And wine — it rejoiceth the heart of man, To cause the face to shine from oil, And bread — the heart of man it supporteth.
Read in context
- 13ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.
- 14ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
- 15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- 16ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ.
- 17ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.
Cross references
- Psalm 23:5 ಕೀರ್ತನೆಗಳು 23:5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- Ecclesiastes 9:7 ಪ್ರಸಂಗಿ 9:7ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
- Ecclesiastes 10:19 ಪ್ರಸಂಗಿ 10:19ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
- Judges 9:13 ನ್ಯಾಯಸ್ಥಾಪಕರು 9:13ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
- Jeremiah 31:12 ಯೆರೆಮೀಯ 31:12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
- Psalm 92:10 ಕೀರ್ತನೆಗಳು 92:10ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- Hebrews 1:9 ಇಬ್ರಿಯರಿಗೆ 1:9ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
- Zechariah 9:15–17 ಜೆಕರ್ಯ 9:15–17ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು. ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು. ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
- Ezekiel 4:16 ಯೆಹೆಜ್ಕೇಲನು 4:16ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- Judges 9:9 ನ್ಯಾಯಸ್ಥಾಪಕರು 9:9ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.