Psalms · chapter 104 · verse 31
Psalm 104:31 in Kannada
ಕರ್ತನ ಮಹಿಮೆಯು ಯುಗಯುಗಕ್ಕೂ ಇರಲಿ; ಕರ್ತನು ತನ್ನ ಕೆಲಸಗಳಲ್ಲಿ ಸಂತೋಷಪಡಲಿ.
Kartana mahimeyu yugayugakkoo irali; kartanu tanna kelasagalalli santoshapadali.
Psalm 104:31 in English
- King James Version (KJV)
- The glory of the LORD shall endure for ever: the LORD shall rejoice in his works.
- World English Bible (WEB)
- Let the LORD’s glory endure forever. Let the LORD rejoice in his works.
- American Standard Version (ASV)
- Let the glory of Jehovah endure for ever; Let Jehovah rejoice in his works:
- Bible in Basic English (BBE)
- Let the glory of the Lord be for ever; let the Lord have joy in his works:
- Darby Translation (DBY)
- The glory of Jehovah will endure for ever; Jehovah will rejoice in his works.
- Webster's Bible (WBS)
- The glory of the LORD shall endure for ever: the LORD shall rejoice in his works.
- Young's Literal Translation (YLT)
- The honour of Jehovah is to the age, Jehovah rejoiceth in His works,
Read in context
- 29ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
- 30ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
- 31ಕರ್ತನ ಮಹಿಮೆಯು ಯುಗಯುಗಕ್ಕೂ ಇರಲಿ; ಕರ್ತನು ತನ್ನ ಕೆಲಸಗಳಲ್ಲಿ ಸಂತೋಷಪಡಲಿ.
- 32ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ.
- 33ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು.
Cross references
- Genesis 1:31 ಆದಿಕಾಂಡ 1:31ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
- 2 Timothy 4:18 2 ತಿಮೊಥೆಯನಿಗೆ 4:18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
- Jeremiah 32:41 ಯೆರೆಮೀಯ 32:41ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- Zephaniah 3:17 ಚೆಫನ್ಯ 3:17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Ephesians 3:21 ಎಫೆಸದವರಿಗೆ 3:21ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Isaiah 65:18–19 ಯೆಶಾಯ 65:18–19ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ. ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
- Isaiah 62:5 ಯೆಶಾಯ 62:5ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
- Revelation 5:12–13 ಪ್ರಕಟನೆ 5:12–13ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Exodus 31:17 ವಿಮೋಚನಕಾಂಡ 31:17ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- Romans 11:36 ರೋಮಾಪುರದವರಿಗೆ 11:36ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Luke 15:5–6 ಲೂಕನು 15:5–6ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
- Luke 15:22–24 ಲೂಕನು 15:22–24ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ; ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ; ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.