Psalms · chapter 104 · verse 32
Psalm 104:32 in Kannada
ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ.
Aatanu bhoomiyannu drushtisalu adu nadu guttade; bettagalannu muttalu avu hoge haayuttave.
Psalm 104:32 in English
- King James Version (KJV)
- He looketh on the earth, and it trembleth: he toucheth the hills, and they smoke.
- World English Bible (WEB)
- He looks at the earth, and it trembles. He touches the mountains, and they smoke.
- American Standard Version (ASV)
- Who looketh on the earth, and it trembleth; He toucheth the mountains, and they smoke.
- Bible in Basic English (BBE)
- At whose look the earth is shaking; at whose touch the mountains send out smoke.
- Darby Translation (DBY)
- He looketh on the earth, and it trembleth; he toucheth the mountains, and they smoke.
- Webster's Bible (WBS)
- He looketh on the earth, and it trembleth: he toucheth the hills, and they smoke.
- Young's Literal Translation (YLT)
- Who is looking to earth, and it trembleth, He cometh against hills, and they smoke.
Read in context
- 30ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
- 31ಕರ್ತನ ಮಹಿಮೆಯು ಯುಗಯುಗಕ್ಕೂ ಇರಲಿ; ಕರ್ತನು ತನ್ನ ಕೆಲಸಗಳಲ್ಲಿ ಸಂತೋಷಪಡಲಿ.
- 32ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ.
- 33ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು.
- 34ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
Cross references
- Psalm 144:5 ಕೀರ್ತನೆಗಳು 144:5ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
- Exodus 19:18 ವಿಮೋಚನಕಾಂಡ 19:18ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- Psalm 97:4–5 ಕೀರ್ತನೆಗಳು 97:4–5ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ. ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ.
- Habakkuk 3:10 ಹಬಕ್ಕೂಕ 3:10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
- Psalm 114:7 ಕೀರ್ತನೆಗಳು 114:7ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
- Amos 8:8 ಆಮೋಸ 8:8ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು.
- Nahum 1:5–6 ನಹೂಮ 1:5–6ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು. ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Psalm 50:3 ಕೀರ್ತನೆಗಳು 50:3ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
- Psalm 77:16 ಕೀರ್ತನೆಗಳು 77:16ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು.
- Habakkuk 3:5–6 ಹಬಕ್ಕೂಕ 3:5–6ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು. ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- Isaiah 64:1–2 ಯೆಶಾಯ 64:1–2ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ, ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
- Jeremiah 4:23–26 ಯೆರೆಮೀಯ 4:23–26ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ. ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು. ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು. ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.