Psalms · chapter 105 · verse 12
Psalm 105:12 in Kannada
ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು.
Aaga avaru lekkakke svalpavaagiyoo haudu, bahala svalpa mandiyaagiyoo paradeshastharaa giyoo adaralli iddaru.
Psalm 105:12 in English
- King James Version (KJV)
- When they were [but] a few men in number; yea, very few, and strangers in it.
- World English Bible (WEB)
- when they were but a few men in number, yes, very few, and foreigners in it.
- American Standard Version (ASV)
- When they were but a few men in number, Yea, very few, and sojourners in it.
- Bible in Basic English (BBE)
- When they were still small in number, and strange in the land;
- Darby Translation (DBY)
- When they were a few men in number, of small account, and strangers in it.
- Webster's Bible (WBS)
- When they were a few men in number; yes, very few, and strangers in it.
- Young's Literal Translation (YLT)
- In their being few in number, But a few, and sojourners in it.
Read in context
- 10ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ--
- 11ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.
- 12ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು.
- 13ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು.
- 14ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು.
Cross references
- Deuteronomy 7:7 ಧರ್ಮೋಪದೇಶಕಾಂಡ 7:7ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
- Genesis 34:30 ಆದಿಕಾಂಡ 34:30ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
- Hebrews 11:9 ಇಬ್ರಿಯರಿಗೆ 11:9ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
- Genesis 23:4 ಆದಿಕಾಂಡ 23:4ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
- Deuteronomy 26:5 ಧರ್ಮೋಪದೇಶಕಾಂಡ 26:5ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.
- Ezekiel 33:24–33 ಯೆಹೆಜ್ಕೇಲನು 33:24–33ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ? ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ? ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು. ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು. ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು. ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ. ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು. ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು. ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
- Genesis 17:8 ಆದಿಕಾಂಡ 17:8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Isaiah 51:2 ಯೆಶಾಯ 51:2ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
- Hebrews 11:12 ಇಬ್ರಿಯರಿಗೆ 11:12ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.
- Acts 7:5 ಅಪೊಸ್ತಲರ ಕೃತ್ಯಗಳು 7:5ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.